ಬೆಂಗಳೂರು :ರಾಜ್ಯದಲ್ಲಿ ಖಾಲಿ ಇರುವ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಹೈಕೋರ್ಟ್ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತಂತೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮುಂದಿನ ಮೇ 23ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆ :
- ನೇರ ನೇಮಕಾತಿ ಮೂಲಕ ಆಯ್ಕೆ ಬಯಸುವ ಅಭ್ಯರ್ಥಿಗಳು ಅಂಗೀಕೃತ ವಿವಿಯಿಂದ ಕಾನೂನು ಪದವಿ ಪಡೆದಿರಬೇಕು ಹಾಗೂ ವಕೀಲರಾಗಿ ನೋಂದಾಯಿಸಿಕೊಂಡಿರಬೇಕು.
- ಎಸ್ಸಿ-ಎಸ್ಟಿ ಅಭ್ಯರ್ಥಿಗಳು 38 ವರ್ಷ ಮೀರಿರಬಾರದು. ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವಯೋಮಾನ ದಾಟಿರಬಾರದು.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇದೆ. ಇನ್ನು ಸೇವಾನಿರತ ಅಭ್ಯರ್ಥಿಗಳಾಗಿದ್ದಲ್ಲಿ ಎಸ್ಸಿ-ಎಸ್ಟಿ 43 ವರ್ಷ ಹಾಗೂ ಸಾಮಾನ್ಯ ವರ್ಗ 40 ವರ್ಷ ಮೀರಿರಬಾರದು.
- ವೇತನ ಶ್ರೇಣಿ: 27700-770-33090-920-40450-1080-44770 ರೂ.ಇರಲಿದೆ.