ಬೆಂಗಳೂರು : ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ಶುಲ್ಕ ಪಡೆದ ಆಸ್ಪತ್ರೆಗಳ ವಿರುದ್ಧ ಸಾರ್ವಜನಿಕರು ದೂರು ದಾಖಲಿಸಲು ಅನುಕೂಲವಾಗುವಂತೆ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡುವಂತೆ ಹಾಗೂ ಬಿಬಿಎಂಪಿ ವೆಬ್ಸೈಟ್ನಲ್ಲಿ ಪ್ರಕಟಿಸಬೇಕೆಂದು ಹೈಕೋರ್ಟ್ ನಿರ್ದೇಶಿಸಿದೆ.
ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಪಿಐಎಲ್ ಅರ್ಜಿಗಳನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಈ ಹಿಂದೆ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ದುಬಾರಿ ಶುಲ್ಕ ವಿಧಿಸಿದ್ದ ಆಸ್ಪತ್ರೆಗಳ ವಿರುದ್ದ ಯಾವ ಕ್ರಮಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸಬೇಕು. ಖಾಸಗಿ ಆಸ್ಪತ್ರೆಗಳು ಹೆಚ್ಚುವರಿಯಾಗಿ ಪಡೆದ ಹಣವನ್ನು ರೋಗಿಗಳಿಗೆ ಮರಳಿಸಿರುವ ಕುರಿತೂ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು ಎಂದು ಪೀಠ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶಿಸಿತು.
ಹೆಚ್ಚುವರಿ ಶುಲ್ಕ ವಾಪಸ್ ಮಾಡಿದ ಆಸ್ಪತ್ರೆಗಳು
ಇದೇ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೋವಿಡ್ ರೋಗಿಗಳಿಂದ ಹೆಚ್ಚು ಹಣ ಸಂಗ್ರಹಿಸಿದ ಆಸ್ಪತ್ರೆಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಹಾಗೆಯೇ, ಖಾಸಗಿ ಆಸ್ಪತ್ರೆಗಳು ಸರ್ಕಾರ ಶಿಫಾರಸ್ಸು ಮಾಡಿದ್ದ ರೋಗಿಗಳಿಂದ 1,98,83,498 ರೂಪಾಯಿಯನ್ನು ಹೆಚ್ಚುವರಿಯಾಗಿ ಸಂಗ್ರಹಿಸಿದ್ದು, ಈವರೆಗೆ 32,22,352 ರೂಪಾಯಿಗಳನ್ನು ವಾಪಸ್ಸು ಮಾಡಿವೆ. ಅದೇ ರೀತಿ ಖಾಸಗಿ ಕೋವಿಡ್ ರೋಗಿಗಳಿಂದ 1,55,91,845 ರೂಪಾಯಿ ಸಂಗ್ರಹಿಸಿದ್ದು, ಈವರೆಗೆ 10,42,339 ರೂಪಾಯಿ ಹಿಂಪಾವತಿಸಿವೆ. ಖಾಸಗಿ ಆಸ್ಪತ್ರೆಗಳು ಹೆಚ್ಚಿಗೆ ಹಣ ವಸೂಲು ಮಾಡಿರುವ ಬಗ್ಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಹಾಯವಾಣಿಗೆ 1,325 ದೂರು ಬಂದಿವೆ ಎಂದು ತಿಳಿಸಿದರು.
ವಲಸೆ ಕಾರ್ಮಿಕರಿಗೂ ಚಿಕಿತ್ಸೆ