ಬೆಂಗಳೂರು:ರಾಜ್ಯದಲ್ಲಿ ಹಿಜಾಬ್ v/s ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ದಿನದಿಂದ ದಿನಕ್ಕೆ ಈ ಪ್ರಕರಣ ಹೆಚ್ಚು ವ್ಯಾಪಕತೆ ಪಡೆದುಕೊಳ್ಳುತ್ತಿರುವ ಕಾರಣ ಇಂದಿನಿಂದ ಮೂರು ದಿನಗಳ ಕಾಲ ಶಾಲಾ-ಕಾಲೇಜ್ಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ, ರಾಜ್ಯದ ಶಾಲಾ-ಕಾಲೇಜ್ಗಳಲ್ಲಿ ಸಮವಸ್ತ್ರ ವಿವಾದ ಹಿನ್ನೆಲೆಯಲ್ಲಿ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಮೂರು ದಿನ ಮಾತ್ರ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ. ಆ ಬಳಿಕ ಎಂದಿನಂತೆ ಶಾಲಾ ಕಾಲೇಜು ಆರಂಭ ಮಾಡ್ತೇವೆ. ಈಗಾಗಲೇ ಸುತ್ತೋಲೆ ಹೊರಡಿಸಿದ್ದೇವೆ. ಸಮವಸ್ತ್ರ ಕಡ್ಡಾಯಗೊಳಿಸಲಾಗಿತ್ತು. ವಿದ್ಯಾರ್ಥಿಗಳ ಹೊರತಾಗಿ ಬೇರೆ ಬೇರೆ ಶಕ್ತಿಗಳು ಇದರ ಹಿಂದಿದೆ ಎಂದು ಶಂಕೆ ವ್ಯಕ್ತಪಡಿಸಿದರು.