ಕರ್ನಾಟಕ

karnataka

ETV Bharat / city

ಕರ್ನಾಟಕ ಬಂಧೀಖಾನೆಗಳ, ಕೈಗಾರಿಕಾ ಪ್ರದೇಶಾಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ - Water Resources Minister Govinda Karajola

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ವಿಧಾನಸಭೆಯಲ್ಲಿ ಕರ್ನಾಟಕ ಬಂಧೀಖಾನೆಗಳ ತಿದ್ದುಪಡಿ ವಿಧೇಯಕ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಬಿವೃದ್ಧಿ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಿದರು.

Assembly Budget meeting
ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು.

By

Published : Mar 17, 2022, 4:46 PM IST

ಬೆಂಗಳೂರು: ಕರ್ನಾಟಕ ಬಂಧೀಖಾನೆಗಳ (ತಿದ್ದುಪಡಿ) ವಿಧೇಯಕ 2022 ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ (ತಿದ್ದುಪಡಿ) ವಿಧೇಯಕ 2022ನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಈ ಎರಡೂ ವಿಧೇಯಕಗಳನ್ನು ಮಂಡಿಸಿದರು.

ಬಂಧೀಖಾನೆಗಳ ತಿದ್ದುಪಡಿ ವಿಧೇಯಕವು ಕೈದಿಗಳೊಂದಿಗಿನ ಸಂವಹನಕ್ಕಾಗಿ ಬಂಧೀಖಾನೆಯ ಪರಿಮಿತಿಯ ಒಳಗೆ ಮತ್ತು ಹೊರಗೆ ಉತ್ತಮ ವಾತಾವರಣವನ್ನು ನಿರ್ಮಿಸುವುದು, ಪೆರೋಲ್ ಉಲ್ಲಂಘನೆ ಮತ್ತು ಯಾವುದೇ ನಿಷೇಧಿತ ವಸ್ತುಗಳನ್ನು ಬಂಧೀಖಾನೆಯೊಳಗೆ ತರುವುದು ಅಥವಾ ಹೊರಗೆ ತೆಗೆದುಕೊಂಡು ಹೋಗುವ ಅಪಾಯವನ್ನು ನಿವಾರಿಸುವ ಉದ್ದೇಶ ಹೊಂದಿದೆ. ಇದಕ್ಕಾಗಿ 1963ರ ಕರ್ನಾಟಕ ಬಂಧೀಖಾನೆಗಳ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುತ್ತಿದೆ.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ವ್ಯವಸ್ಥೆಯಲ್ಲಿ ನ್ಯಾಯೋಚಿತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು ಅಧಿನಿಯಮಕ್ಕೆ ಉಪಬಂಧ ಕಲ್ಪಿಸಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಅಧಿನಿಯಮ 1966ಕ್ಕೆ ತಿದ್ದುಪಡಿ ತರುವ ಉದ್ದೇಶವನ್ನು ಹೊಂದಿದೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details