ಬೆಂಗಳೂರು :ವಿಧಾನ ಪರಿಷತ್ ಚುನಾವಣೆಗೆ (Karnataka Legislative Council Election) ಬೆಳಗಾವಿಯಿಂದ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ತಪ್ಪಿದ ಹಿನ್ನೆಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು (Ramesh Jarkiholi) ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಆರ್.ಟಿ.ನಗರದ ಸಿಎಂ ಬೊಮ್ಮಾಯಿ (CM Basavaraj Bommai) ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ಸಹೋದರನಿಗೆ ಪರಿಷತ್ ಟಿಕೆಟ್ ಕೈತಪ್ಪಿರುವುದಕ್ಕೆ ಸಿಎಂ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.