ಬೆಂಗಳೂರು: ಸೋಮವಾರ(ನಾಳೆ) ವಿಧಾನ ಪರಿಷತ್ನ ನಾಲ್ಕು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಕರ್ನಾಟಕ ವಾಯವ್ಯ ಪದವೀಧರರ ಕ್ಷೇತ್ರ, ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ, ಕರ್ನಾಟಕ ವಾಯವ್ಯ ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿದೆ. ಅದರಂತೆ, ಚುನಾವಣಾ ಕ್ಷೇತ್ರ ವ್ಯಾಪ್ತಿ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ರಾಜ್ಯ ವಿಧಾನ ಪರಿಷತ್ ಚುನಾವಣೆ: 4 ಮತಕ್ಷೇತ್ರ ವ್ಯಾಪ್ತಿಗೆ ರಜೆ ಘೋಷಣೆ - ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ
ಜೂನ್ 13ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು ನಾಲ್ಕು ಮತಕ್ಷೇತ್ರ ವ್ಯಾಪ್ತಿಯಲ್ಲಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ:ಪರಿಷತ್ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ: ಸಿಎಂ ಬೊಮ್ಮಾಯಿ ವಿಶ್ವಾಸ