ಬೆಂಗಳೂರು:ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಕೋವಿಡ್ ಹಾವಳಿ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಸಚಿವರ ಜೊತೆಗೆ ಸಭೆ ನಡೆಸಿದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ವೈ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳ ಜತೆ ಕೋವಿಡ್ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಬಿಎಸ್ವೈ ವಿಶೇಷ ಆರ್ಥಿಕ ಪ್ಯಾಕೇಜ್ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.