ಕರ್ನಾಟಕ

karnataka

ETV Bharat / city

Live: ರಾಜ್ಯಕ್ಕೆ ಬಸವರಾಜ ಬೊಮ್ಮಾಯಿ ನೂತನ ಸಾರಥಿ - ಬಿಜೆಪಿ ಸಭೆ

karnataka next cm selection process live updates
ಯಾರಾಗ್ತಾರೆ ಸಿಎಂ... ಕ್ಷಣ ಕ್ಷಣದ ಮಾಹಿತಿ

By

Published : Jul 27, 2021, 7:05 PM IST

Updated : Jul 28, 2021, 2:13 AM IST

22:57 July 27

ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ

  • ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಇಂದು ರಾಜಭವನದಲ್ಲಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
  • ಕೇಂದ್ರದಿಂದ ಬಂದಿರುವ ವೀಕ್ಷಕರ ತಂಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

22:55 July 27

ನಾನು ದೆಹಲಿಗೆ ಹೋಗಲೇ ಇಲ್ಲ, ಆದ್ರೂ ಗುರುತಿಸಿ ಜವಾಬ್ದಾರಿ ಕೊಟ್ಟಿದ್ದಾರೆ - ಬಸವರಾಜ ಬೊಮ್ಮಾಯಿ

  • ನಾನು ದೆಹಲಿಗೆ ಹೋಗಲೇ ಇಲ್ಲ, ಆದ್ರೂ ಗುರುತಿಸಿ ಜವಾಬ್ದಾರಿ ಕೊಟ್ಟಿದ್ದಾರೆ
  • ಒಂದು ಕಡೆ ಕೋವಿಡ್‌, ಮತ್ತೊಂದು ಕಡೆ ಪ್ರವಾಹವನ್ನು ಎದುರಿಸಬೇಕು
  • ಪ್ರವಾಹ, ಕೋವಿಡ್‌ ವಿರುದ್ಧ ಹೋರಾಟಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ
  • ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇನೆ - ಬಸವರಾಜ ಬೊಮ್ಮಾಯಿ
  • ಬಡವ, ರೈತ, ದೀನ-ದಲಿತರು, ವಿಶೇಷವಾಗಿ ಮಹಿಳೆಯರ ಪರ ಸರ್ಕಾರ ಇದಾಗುತ್ತದೆ
  • ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ಕಾರವನ್ನು ನಡೆಸುತ್ತೇನೆ
  • ಎಲ್ಲಾ ಸವಾಲುಗಳನ್ನು ಹಿಮ್ಮೆಟ್ಟಿಸುವ ವಿಶ್ವಾಸ ಇದೆ
  • ಜನ ಪರ ಆಡಳಿತ ನೀಡುತ್ತೇನೆ - ಬಿಜೆಪಿ ಕಚೇರಿ ಬಳಿ ಬೊಮ್ಮಾಯಿ ಹೇಳಿಕೆ
  • ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ
  • ಬಿಜೆಪಿ ಕಚೇರಿಗೆ ಆಗಮಿಸಿದ್ದ ನಿಯೋಜಿತ ಸಿಎಂ ಬೊಮ್ಮಾಯಿ
  • ನಾಳೆ (ಜು.28) ನಾನು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇನೆ
  • ನಮ್ಮ ತಂದೆಯ ವಿಚಾರಗಳು, ಮಾರ್ಗದರ್ಶನಗಳು ನನಗೆ ಸದಾ ದಾರಿ ದೀಪ
  • ನನಗೆ ಸಂಪೂರ್ಣವಾದ ಸ್ವತಂತ್ರ ಇರುತ್ತದೆ - ನಿಯೋಜಿತ ಸಿಎಂ ಬೊಮ್ಮಾಯಿ
  • ಕಾಲ ಕಾಲಕ್ಕೆ ಹಿರಿಯರ ಮಾರ್ಗದರ್ಶನ ಪಡೆಯುತ್ತೇನೆ - ಬಸವರಾಜ ಬೊಮ್ಮಾಯಿ
  • ಎಲ್ಲಾ ನಾಯಕರ ಜೊತೆ ಪೋನ್‌ ಮೂಲಕ ಸಂಪರ್ಕ ಮಾಡುತ್ತಿದ್ದೇನೆ
  • ಯಡಿಯೂರಪ್ಪ ಮಾರ್ಗದರ್ಶನದಲ್ಲಿ ನಡೆಯುತ್ತೇನೆ
  • ಉತ್ತಮ ಆಡಳಿತ ನೀಡುವುದೇ ನನ್ನ ಗುರಿ - ಬಸವರಾಜ ಬೊಮ್ಮಾಯಿ
  • ಪಕ್ಷದಲ್ಲಿ ಎಲ್ಲರೂ ಸಮಾನರೇ, ಅದರಲ್ಲಿ ನಾನು ಒಬ್ಬ - ಬೊಮ್ಮಾಯಿ
  • ಬೆಂಗಳೂರಿನಲ್ಲಿ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

22:48 July 27

ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಕುರಿತು ನಾಯಕರ ಪ್ರತಿಕ್ರಿಯೆ ಹೀಗಿತ್ತು..

ಸರ್ವಾನುಮತದಿಂದ ಬಸವರಾಜ ಬೊಮ್ಮಾಯಿ ಆಯ್ಕೆ ಎಂದ ನಾಯಕರು

ಬೆಂಗಳೂರಿನ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮುಂದಿನ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಲಾಗಿದೆ. ಸರ್ವಾನುಮತದಿಂದ ಆಯ್ಕೆ ಮಾಡಿರುವುದಾಗಿ ನಿರ್ಗಮಿತ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪ್ರತಿಕ್ರಿಯಿಸಿದ್ದಾರೆ.

22:09 July 27

ಬಿಜೆಪಿ ಕಚೇರಿಗೆ ಬಸವರಾಜ ಬೊಮ್ಮಾಯಿ ಆಗಮನ

  • ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಿಳಿನ್‌ ಕುಮಾರ್‌ ಕಟೀಲ್‌ ಕೇಸರಿ ಶಾಲು ಹೊದಿಸಿ, ಹೂ ನೀಡಿ ಅಭಿನಂದನೆ
  • ಪಕ್ಷದ ಇತರೆ ನಾಯಕರಿಂದೂ ಅದ್ಧೂರಿಯಾಗಿ ಸ್ವಾಗತ

22:07 July 27

ಪ್ರವಾಹ,ಕೋವಿಡ್‌ ವಿರುದ್ಧ ಹೋರಾಡಲು ಎಲ್ಲಾ ರೀತಿಯ ಕ್ರಮ - ನಿಯೋಜಿತ ಸಿಎಂ ಬೊಮ್ಮಾಯಿ

  • ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಹಾಗೂ ಕೋವಿಡ್‌-19 ವಿರುದ್ಧ ಹೋರಾಡಲು ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ - ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

21:52 July 27

ಬೊಮ್ಮಾಯಿ ಅವರು ನುರಿತ ರಾಜಕಾರಣಿ - ಬಿ.ಎಲ್‌.ಸಂತೋಷ್‌ ಟ್ವೀಟ್

ಬಸವರಾಜ ಬೊಮ್ಮಾಯಿ ಅವರು ಒಬ್ಬ ನುರಿತ ರಾಜಕಾರಣಿ

ಆಡಳಿತದಲ್ಲಿ ಹಳೆಯ ಕೈ - ಬಿ.ಎಲ್‌.ಸಂತೋಷ್‌

ರಾಜ್ಯವನ್ನು ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ

ಬಿ.ಎಲ್‌.ಸಂತೋಷ್‌, ಬಿಜೆಪಿ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

21:47 July 27

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅಭಿನಂದನೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು

ಆಡಳಿತದ ಮೇಲೆ ಮರಳಿ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಭರವಸೆ ಇರಿಸಿದೆ

ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅಭಿನಂದನೆ

21:35 July 27

'ನಿಯೋಜಿತ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರಲಿದೆ'- ಡಾ.ಕೆ.ಸುಧಾಕರ್‌

  • ಕರ್ನಾಟಕದ ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು
  • ತಮ್ಮ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿ ಪಥದಲ್ಲಿ ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಶುಭ ಕೋರುತ್ತೇನೆ
  • ನಾಡಿನ ಸಮಸ್ತ ಜನರ ಆಶೋತ್ತರಗಳನ್ನು ಸಾಕಾರಗೊಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡೋಣ
  • ನಿಯೋಜಿತ ಮುಖ್ಯಮಂತ್ರಿಗೆ ಶುಭ ಕೋರಿ ಡಾ.ಕೆ.ಸುಧಾಕರ್‌ ಟ್ವೀಟ್‌

21:18 July 27

ನಿಯೋಜಿತ ಸಿಎಂಗೆ ಮಾಜಿ ಸಿಎಂ ಹೆಚ್‌ಡಿಕೆ ಅಭಿನಂದನೆ

  • ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು
  • ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ
  • ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು
  • ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ
  • ನಿಯೋಜಿತ ಸಿಎಂಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿ ಟ್ವೀಟ್‌

20:45 July 27

ರಾಜಭವನಕ್ಕೆ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಆಗಮನ

  • ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜಭವನಕ್ಕೆ ಆಗಮಿಸಿದ್ದು, ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲ ಗೆಹ್ಲೋಟ್‌ ಅವರಿಗೆ ಮನವಿ ಮಾಡಿದ್ದಾರೆ
  • ನಾಳೆ ಬೆಳಿಗ್ಗೆ 11 ಗಂಟೆಗೆ ರಾಜಭವನದಲ್ಲಿ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

20:41 July 27

ನಿಯೋಜಿತ ಸಿಎಂಗೆ ನಿರ್ಗಮಿತ ಸಿಎಂ ಬಿಎಸ್‌ವೈ ಅಭಿನಂದನೆ ಸಲ್ಲಿಸಿ ಟ್ವೀಟ್‌

  • ರಾಜ್ಯದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು
  • ಪಕ್ಷದ ಎಲ್ಲ ನಾಯಕರ ಬೆಂಬಲದೊಂದಿಗೆ, ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಬೊಮ್ಮಾಯಿ ಅವರ ಸಮರ್ಥ, ಯಶಸ್ವಿ ಕಾರ್ಯನಿರ್ವಹಣೆಗೆ ಹಾರೈಸುತ್ತೇನೆ
  • ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌

20:37 July 27

ರಾಜ್ಯಕ್ಕೆ ಮೂವರು ಡಿಸಿಎಂಗಳು

  • ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮೂವರು ಡಿಸಿಎಂಗಳ ಹೆಸರು ಘೋಷಣೆ
  • ಆರ್‌.ಅಶೋಕ್‌, ಗೋವಿಂದ ಕಾರಜೋಳ ಹಾಗೂ ಬಿ.ಶ್ರೀರಾಮುಲು ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ

20:25 July 27

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ - ನಿಯೋಜಿತ ಸಿಎಂ ಬೊಮ್ಮಾಯಿ

  • ಪಕ್ಷದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಬಿಎಸ್‌ ಯಡಿಯೂರಪ್ಪ ನಿರೀಕ್ಷೆ ಇಟ್ಟಿದ್ದಾರೆ. ಜನ ಪರ, ಜನರಿಗೋಸ್ಕರ ಕೆಲಸ ಮಾಡುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

20:15 July 27

ಗೆಲುವಿನ ಸಂಕೇತ ತೋರಿಸಿದ ಬಿಜೆಪಿ ನಾಯಕರು

  • ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ ಬಳಿಕ ಕೇಂದ್ರ ಹಾಗೂ ರಾಜ್ಯದ ನಾಯಕರು ಗೆಲುವಿನ ಸಂಕೇತ ತೋರಿಸಿದರು.

20:10 July 27

ಶಾಸಕಾಂಗ ಸಭೆಯಲ್ಲಿ ಮುಂದಿನ ಸಿಎಂ ಆಗಿ ಆಯ್ಕೆಯಾಗಿರುವ ಬೊಮ್ಮಾಯಿ

  • ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರನ್ನು ನಾಯಕರು ಅಭಿನಂದಿಸಿದರು.

19:59 July 27

ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ

  • ರಾಜ್ಯದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

19:51 July 27

ಕೋರ್‌ ಕಮಿಟಿ ಸಭೆಯಲ್ಲಿ ಬೊಮ್ಮಾಯಿ ಹೆಸರು ಸಿಎಂ ಸ್ಥಾನಕ್ಕೆ ಅಂತಿಮ

  • ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ನಡೆದಿರುವ ಕೋರ್‌ ಕಮಿಟಿ ಸಭೆಯಲ್ಲಿ ಸಚಿವ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಸಿಎಂ ಸ್ಥಾನಕ್ಕೆ ಅಂತಿಮಗೊಳಿಸಲಾಗಿದೆ.

19:42 July 27

ಬಸವರಾಜ ಬೊಮ್ಮಾಯಿ ಸಿಎಂ ಬಹುತೇಕ ಖಚಿತ

  • ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯದ ಮುಂದಿನ ಸಿಎಂ ಆಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಎನ್ನಲಾಗುತ್ತಿದೆ.

19:23 July 27

ಶಾಸಕಾಂಗ ಪಕ್ಷದ ಸಭೆ ಆರಂಭ

  • ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿರುವ ಕ್ಯಾಪಿಟಲ್‌ ಹೋಟೆಲ್‌ಗೆ ಆಗಮಿಸಿದ ಹಂಗಾಮಿ ಸಿಎಂ ಬಿ.ಎಸ್‌.ಯಡಿಯೂರಪ್ಪ. ಸಭೆಗೆ ಹೋಗುವ ಮುನ್ನ ವಿಜಯದ ಸಂಕೇತ ತೋರಿಸಿದ ಬಿಎಸ್‌ವೈ.

19:17 July 27

ವೀಕ್ಷಕರ ತಂಡದ ಜೊತೆ ಬಂದ ಬಿಎಸ್‌ವೈ

  • ಕೇಂದ್ರದ ವೀಕ್ಷಕರ ಟೀಂ ಜೊತೆ ಒಂದೇ ಕಾರಿನಲ್ಲಿ ಹೊರಟ ಬಿಎಸ್‌ವೈ
  • ಕಾವೇರಿ ನಿವಾಸದಿಂದ ಹೊರಟ ಯಡಿಯೂರಪ್ಪ
  • ಕ್ಯಾಪಿಟಲ್ ಹೋಟೆಲ್‌ಗೆ ಹೊರಟ ಹಂಗಾಮಿ ಸಿಎಂ  
  • ಕೇಂದ್ರದ ವೀಕ್ಷಕರ ತಂಡದ ಕಿಶನ್ ರೆಡ್ಡಿ ಸಾಥ್
  • ಶಾಸಕಾಂಗ ಸಭೆಯಲ್ಲಿ ಭಾಗವಹಿಸಲು ಹೊರಟ ಬಿಎಸ್‌ವೈ
  • ಮುರುಗೇಶ್ ನಿರಾಣಿ ಹಾಗೂ ಸಿ.ಟಿ. ರವಿ ಆಗಮನ

19:07 July 27

ಕೆಕೆ ಗೆಸ್ಟ್‌ಹೌಸ್‌ಗೆ ಆಗಮಿಸಿದ ಬಸವರಾಜ ಬೊಮ್ಮಾಯಿ

  • ಮುಂದಿನ ಸಿಎಂ ಎನ್ನಲಾಗುತ್ತಿರುವ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಕೆಕೆ ಗೆಸ್ಟ್‌ ಹೌಸ್‌ಗೆ ಆಗಮನ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸಭೆ ಆಗಮನ.

18:40 July 27

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮುಂದಿನ ನಾಯಕನ ನಿರ್ಧಾರ!

  • ರಾಜ್ಯದ ಮುಂದಿನ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆ ಆಗುವ ಸಾಧ್ಯತೆ ದಟ್ಟವಾಗಿದ್ದು, ಇಂದು ಸಂಜೆ 7 ಗಂಟೆಗೆ ನಡೆಯುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ ಎನ್ನಲಾಗುತ್ತಿದೆ.
  • ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮೊದಲು ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಂಸದೀಯ ಮಂಡಳಿಯಲ್ಲಿ ನಡೆದಿರುವ ಚರ್ಚೆ ಕುರಿತು ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
  • ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಶಾಸಕರು ಸಭೆಗೆ ಹಾಜರಾಗುತ್ತಿದ್ದಾರೆ.‌ ಶಾಸಕಾಂಗ ಸಭೆ ಆರಂಭಕ್ಕೂ ಮೊದಲು ಪಕ್ಷದ ಕೋರ್ ಕಮಿಟಿ ಸಭೆಗೆ ನಿರ್ಧರಿಸಿದ್ದು, ಸಭೆಗೆ ಸಿದ್ಧತೆ ನಡೆಸಲಾಗಿದೆ.
  • ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಕುರಿತು ಪಕ್ಷದ ಸಂಸದೀಯ ಮಂಡಳಿಯಲ್ಲಿ ಕೈಗೊಂಡಿರುವ ನಿರ್ಧಾರ, ರಾಜ್ಯ ಘಟಕಕ್ಕೆ ಕಳಿಸಿರುವ ಸೂಚನೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ಪ್ರಸ್ತಾಪಿಸಲಿದ್ದಾರೆ.
  • ವರಿಷ್ಠರ ನಿರ್ಧಾರಕ್ಕೆ ಅನುಗುಣವಾಗಿ ಶಾಸಕಾಂಗ ಪಕ್ಷದ ಸಭೆ ನಡೆಸಬೇಕು, ಪೂರಕ ರೀತಿಯ ನೂತನ ನಾಯಕನ ಆಯ್ಕೆ ಆಗಬೇಕು ಎನ್ನುವ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಬಹುತೇಕ ಅಭ್ಯರ್ಥಿ ಯಾರು ಎನ್ನುವುದು ಕೋರ್ ಕಮಿಟಿ ಸಭೆಯಲ್ಲೇ ಅಂತಿಮವಾಗಲಿದ್ದು, ಅದೇ ಹೆಸರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸಿ ಅನುಮೋದನೆ ಪಡೆದು ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದೆ.
  • ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದ್ದು, ಯಡಿಯೂರಪ್ಪ ಸಮ್ಮುಖದಲ್ಲೇ ನೂತನ ನಾಯಕನ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
Last Updated : Jul 28, 2021, 2:13 AM IST

ABOUT THE AUTHOR

...view details