ಬೆಂಗಳೂರು:ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ಗಾಗಿ ಬಿಜೆಪಿಯಲ್ಲಿ ಹಗ್ಗ-ಜಗ್ಗಾಟ ಮುಂದುವರೆದಿದ್ದು, ನಾ ಕೊಡೆ, ನೀ ಬಿಡೆ ಎಂಬ ಸ್ಥಿತಿ ನಿರ್ಮಾಣವಾಗಿದೆ.
ಗುರುವಾರ ತಡರಾತ್ರಿವರೆಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆದಿದ್ದು, ಅನರ್ಹ ಶಾಸಕ ಆರ್. ಶಂಖರ್ ಅವರು ಪತ್ನಿ ಹಾಗೂ ಪುತ್ರನೊಂದಿಗೆ ಬಿಎಸ್ವೈ ನಿವಾಸಕ್ಕೆ ಆಗಮಿಸಿ ಟಿಕೆಟ್ ನೀಡಿವಂತೆ ಪಟ್ಟು ಹಿಡಿದರು. ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಸಂಪುಟದಲ್ಲಿ ಅವಕಾಶ ನೀಡುವ ಭರವಸೆ ಕೊಟ್ಟರೂ ಅದಕ್ಕೆ ಒಪ್ಪದೆ ಟಿಕೆಟ್ಗಾಗಿ ಲಾಬಿ ನಡೆಸಿದ್ದಾರೆ.
ಶಂಕರ್ ಪಟ್ಟಿನಿಂದ ವಿಚಲಿತರಾಗಿರುವ ಯಡಿಯೂರಪ್ಪ ಅವರು ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.