ಬೆಂಗಳೂರು: 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಸಾಹಿತಿ ದೊಡ್ಡರಂಗೇಗೌಡರು ಹಿಂದಿ ಭಾಷೆ ಕುರಿತಾದ ಹೇಳಿಕೆಗೆ ಖಂಡನೆ ವ್ಯಕ್ತವಾಗುತ್ತಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ನೇತೃತ್ವದ ತಂಡ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರಿಗೆ ಪತ್ರ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸಾಹಿತಿ ದೊಡ್ಡರಂಗೇಗೌಡರ ಹಿಂದಿ ಕುರಿತಾದ ಮೃದು ಧೋರಣೆ ಹಾಗೂ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಕನ್ನಡದ ಹಿತಕ್ಕೆ ಮಾರಕ. ಅವರು ಈ ಕೂಡಲೇ ತಮ್ಮ ಹೇಳಿಕೆ ಹಿಂಪಡೆಯಬೇಕು.
ಜೊತೆಗೆ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಅಂಶಗಳು ಇರದಂತೆ ಎಚ್ಚರ ವಹಿಸಬೇಕು. ಇಲ್ಲವಾದಲ್ಲಿ ವೇದಿಕೆಯ ಮುಂಭಾಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು. ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಪತ್ರ ಬಳಿಕ ಮಾತನಾಡಿದ, ಸಂಘದ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಸಾಹಿತಿಗಳ ಬಗ್ಗೆ ಅಭಿಮಾನ ಇದೆ. ಆದರೂ ಅವರು ಸಂದರ್ಶನದಲ್ಲಿ ಕನ್ನಡಿಗರಿಗೆ ಮುಜುಗರ ಉಂಟು ಮಾಡಿದ್ದಾರೆ. ಈಗ ಸರ್ಕಾರ ಸಹ ಪುಸ್ತಕಗಳಲ್ಲಿ, ಬ್ಯಾಂಕ್ಗಳಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ. ಈಗ ಸಮ್ಮೇಳನಾಧ್ಯಕ್ಷರ ಹೇಳಿಕೆ ಕೂಡ ಇದೇ ರೀತಿಯಲ್ಲಿರುವುದರಿಂದ ಇದನ್ನು ಖಂಡಿಸಿ ಪತ್ರ ಬರೆದಿದ್ದೇವೆ ಎಂದರು.