ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚೆಚ್ಚು ಕೋವಿಡ್ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಈ ಹಿಂದಿನ ದಿನಕ್ಕಿಂತಲೂ ಅತಿ ಹೆಚ್ಚಿನ ಸೋಂಕು ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಂದೇ ದಿನದಲ್ಲಿ 41,457 ಹೊಸ ಸೋಂಕಿತ ಪ್ರಕರಣಗಳು ಕಾಣಿಸಿಕೊಂಡಿದ್ದು, ಇದರಲ್ಲಿ ಬೆಂಗಳೂರಿನಲ್ಲೇ 25,595 ಪ್ರಕರಣ ದಾಖಲಾಗಿವೆ. ಉಳಿದ 15 ಸಾವಿರ ಪ್ರಕರಣಗಳು ವಿವಿಧ ಜಿಲ್ಲೆಗಳಲ್ಲಿ ಪತ್ತೆಯಾಗಿವೆ. ಒಟ್ಟು 20 ಜನರು ಬಲಿಯಾಗಿದ್ದಾರೆ. ಕರ್ನಾಟಕದಲ್ಲಿ ಸದ್ಯ ಶೇ. 22.30ರಷ್ಟು ಪಾಸಿಟಿವಿಟಿ ರೇಟ್ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಇಂದು 8,353 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,50,381 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಒಂದೇ ದಿನ 1,825,872 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.