ಬೆಳಗಾವಿ:ಸಚಿವ ಬೈರತಿ ಬಸವರಾಜ ವಿರುದ್ಧ ಎಫ್ಐಆರ್ ದಾಖಲು ಆದೇಶ ವಿಚಾರವಾಗಿ ನಿಲುವಳಿ ಸೂಚನೆ ಮಂಡನೆಗೆ ಸಭಾಪತಿ ಅವಕಾಶ ನೀಡಿರಲಿಲ್ಲ. ಈ ಹಿನ್ನೆಲೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ 14 ಕಾಂಗ್ರೆಸ್ ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಆದೇಶಿಸಿದ್ದಾರೆ.
ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಕೂಗುತ್ತಾ ಭಿತ್ತಿಪತ್ರ ಹಿಡಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ವೇಳೆ ಮಧ್ಯಪ್ರವೇಶಿಸಿದ ಸಚಿವ ವಿ.ಸೋಮಣ್ಣ ಸಭಾಪತಿ ಈಗಾಗಲೇ ರೂಲಿಂಗ್ ನೀಡಿದ್ದಾರೆ. ಸದನ ಉತ್ತಮವಾಗಿ ನಡೆಸಬೇಕು. ಕೋರ್ಟ್ನಲ್ಲಿರುವ ಪ್ರಕರಣ ಇಲ್ಲಿ ಚರ್ಚೆ ಮಾಡಲಿಕ್ಕೆ ಸಾಧ್ಯವಿಲ್ಲ. ಹೀಗಾಗಿ ಸದನ ನಡೆಯಲು ಅವಕಾಶ ನೀಡಿವಂತೆ ಮನವಿ ಮಾಡಿದರು.
ಕಾಂಗ್ರೆಸ್ ಬಿಜೆಪಿ ಸದಸ್ಯರಿಂದ ಸದನದಲ್ಲಿ ಗದ್ದಲ ನಡೆದಾಗ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಭೈರತಿ ಬಸವರಾಜ ರಾಜೀನಾಮೆಗೆ ಆಗ್ರಹಿಸಿದರು. ಪೀಠದ ಆದೇಶ ನೀಡಿದ ಮೇಲೆ ಅದನ್ನ ಪಾಲನೆ ಮಾಡಬೇಕು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಶ್ನಿಸಲಾಗಿದೆ. ಹೀಗಾಗಿ ಚರ್ಚೆಗೆ ಅವಕಾಶ ನೀಡಬಾರದು ಎಂದು ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಸಭಾಪತಿ ಬಸವರಾಜ ಹೊರಟ್ಟಿ ಆದೇಶ
ಸಭಾಪತಿ ಬಸವರಾಜ ಹೊರಟ್ಟಿ ಸದನ ಬಾವಿಯಲ್ಲಿರುವ ಸದಸ್ಯರನ್ನ ಒಂದು ದಿನ ಮಟ್ಟಿಗೆ ಅಮಾನತು ಮಾಡಿ ಆದೇಶ ಮಾಡಿದರು. ಕಾಂಗ್ರೆಸ್ನ ಬಹುತೇಕ ಸದಸ್ಯರು ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸುವುದರ ಜತೆಗೆ, ಸಭಾಪತಿಗಳ ರೂಲಿಂಗ್ ಪ್ರಶ್ನಿಸಿದ್ದಕ್ಕೆ ಒಂದು ದಿನದ ಮಟ್ಟಿಗೆ ಅಮಾನತು ಮಾಡಿದ ಸಭಾಪತಿ ಹೊರಟ್ಟಿ ಸದನವನ್ನು ನಿಯಂತ್ರಣಕ್ಕೆ ಪಡೆಯುವ ಯತ್ನ ಮಾಡಿದರು.