ಬೆಂಗಳೂರು : ಕೋವಿಡ್ -19 ಹಿನ್ನೆಲೆಯಲ್ಲಿ ಕಾರ್ಯ ಸ್ಥಗಿತಗೊಳಿಸಿದ್ದ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ನಾಳೆಯಿಂದ ತನ್ನ ಕಾರ್ಯ ಕಲಾಪ ಪುನಾರಂಭಿಸಲಿದೆ.
ನಾಳೆಯಿಂದ ಕಾರ್ಯಾರಂಭ ಮಾಡಲಿದೆ ಕರ್ನಾಟಕ ಆಡಳಿತ ನ್ಯಾಯಮಂಡಳಿ - State Administrative Tribunals
ಕರ್ನಾಟಕ ಆಡಳಿತ ನ್ಯಾಯಮಂಡಳಿ ನಾಳೆಯಿಂದ ತನ್ನ ಕಾರ್ಯ ಕಲಾಪವನ್ನು ಪುನಾರಂಭಿಸಲಿದೆ. ಕೊರೊನಾ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಕೆಎಟಿ ಇಷ್ಟು ದಿನಗಳ ಕಾಲ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿತ್ತು.
ಆದರೆ, ಸುರಕ್ಷತೆ ದೃಷ್ಟಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ಅವುಗಳಿಗೆ ಒಳಪಟ್ಟು ಬೆಂಗಳೂರು, ಕಲಬುರಗಿ ಹಾಗೂ ಬೆಳಗಾವಿ ಪೀಠಗಳಲ್ಲಿ ಕಲಾಪ ಆರಂಭವಾಗಲಿದೆ.
ಕೆಎಟಿ ಆವರಣಕ್ಕೆ ಸೀಮಿತ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಕೆಎಟಿಗೆ ಬರುವವರರು ಮಾಸ್ಕ್ ಮತ್ತು ಗ್ಲೌಸ್ ಧರಿಸುವುದು ಕಡ್ಡಾಯವಾಗಿದೆ. ಆದರೆ, ಸುಪ್ರೀಂ ಸೂಚನೆ ಮೇರೆಗೆ ವಕೀಲರು ಕೋಟು ಮತ್ತು ಗೌನ್ ಧರಿಸುವುದರಿಂದ ವಿನಾಯ್ತಿ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.