ಕರ್ನಾಟಕ

karnataka

ETV Bharat / city

ಮಹಿಳಾ ದಿನಕ್ಕೆ ಗುಡ್ ನ್ಯೂಸ್​: ಮಹಿಳೆಯರಿಗೆ ಶೇ.4ರಷ್ಟು ಬಡ್ಡಿದರದಲ್ಲಿ 2 ಕೋಟಿ ರೂ.ವರೆಗೆ ಸಾಲ

ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಮಹಿಳೆಯರಿಗೆ 2 ಕೋಟಿ ರೂ.ವರೆಗೆ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ಸೇರಿದಂತೆ ಅನೇಕ ಭರವಸೆಗಳನ್ನು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೀಡಿದ್ದಾರೆ.

Karnataka Statee Budget on Woman
ಬಜೆಟ್‌ನಲ್ಲಿ ಮಹಿಳೆಯರಿಗೆ ವಿಶೇಷ ಆದ್ಯತೆ

By

Published : Mar 8, 2021, 12:50 PM IST

Updated : Mar 8, 2021, 6:59 PM IST

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್​ ಅನ್ನು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಮಂಡನೆ ಮಾಡುತ್ತಿದ್ದು, ಬಜೆಟ್​​​​ನಲ್ಲಿ ಮಹಿಳೆಯರಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಶುಭಕೋರಿದ್ದ ಸಿಎಂ ಬಿಎಸ್​ವೈ, ಬಜೆಟ್‌ನಲ್ಲಿ ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿದ್ದೇವೆ ಎಂದು ಹೇಳಿದ್ದರು. ಅದರಂತೆ ಇದೀಗ ಮಹಿಳೆಯರಿಗೆ 2 ಕೋಟಿ ರೂ.ವರೆಗೆ ಶೇ.4ರಷ್ಟು ಬಡ್ಡಿದರದಲ್ಲಿ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಮಹಿಳೆಯರಿಗೆ ವಿಶೇಷ ಆದ್ಯತೆ

ಅಲ್ಲದೇ ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ಸ್ಥಾಪಿಸುವುದಾಗಿ ಕೂಡ ಹೇಳಿದ್ದಾರೆ.

ಬಿಎಂಟಿಸಿ ಬಸ್​​ಗಳಲ್ಲಿ ಮಹಿಳೆಯರಿಗೆ 'ವನಿತಾ ಸಂಗಾತಿ' ಬಸ್ ಪಾಸ್ ವ್ಯವಸ್ಥೆ ಮಾಡಲಾಗಿದೆ. ನೋಂದಣಿ, ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಇಳಿಕೆ ಮಾಡಲಾಗಿದೆ ಎಂದು ಯಡಿಯೂರಪ್ಪ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

Last Updated : Mar 8, 2021, 6:59 PM IST

ABOUT THE AUTHOR

...view details