ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ:
- ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನ ನೀಡಲಾಗಿದ್ದು, ಪ್ರತಿ ಎಕರೆಗೆ 250 ರೂ.ಗಳಂತೆ ಡೀಸೆಲ್ ಸಹಾಯಧನ ಹಾಗೂ 600 ಕೋಟಿ ರೂ. ಅನುದಾನ ನೀಡಲಾಗಿದೆ.
- ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತು ಮಾಡಲು 50 ಕೋಟಿ ರೂ. ಹಂಚಿಕೆ.
- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ.
- ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆ ಮತ್ತು ಸಾಗಾಣಿಕೆಗೆ ವಿಜಯಪುರ ಜಿಲ್ಲೆಯ ತೊರವಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹ ವ್ಯವಸ್ಥೆ ಸ್ಥಾಪನೆ ಹಾಗೂ ಶೀತಲೀಕೃತ ಸರಕು ಸಾಗಣೆ ವಾಹನ ಪೂರೈಕೆ.
- ಬಡ್ಡಿ ರಿಯಾಯಿತಿ ಯೋಜನೆಯಡಿ 3 ಲಕ್ಷ ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದೆ.
ಉತ್ಪಾದನೆ ಹೆಚ್ಚಳ ಹಾಗೂ ರೈತರ ಕ್ಷೇಮಾಭಿವೃದ್ಧಿ:
- ಗ್ರಾಮೀಣ ರೈತರಿಗೆ ಆರೋಗ್ಯ ಸೇವೆ ಒದಗಿಸಲು ಪರಿಸ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ. ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಅನುದಾನ.
- 57 ತಾಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ-2.0 ಜಾರಿ.
- ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ.