ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 5,030 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದರೆ, 97 ಮಂದಿ ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 49,931 ಕ್ಕೆ ಏರಿಕೆಯಾಗಿದೆ. ಇಂದು 2071 ಮಂದಿ ರಾಜ್ಯದಲ್ಲಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಚೇತರಿಕೆ ಪ್ರಮಾಣ ಶೇಕಡಾ 36.25 ಇದೆ. ಮರಣ ಪ್ರಮಾಣ 1.81 ಕ್ಕೆ ಏರಿಕೆಯಾಗಿದೆ. ಒಟ್ಟು 11,40,647 ಮಂದಿಯ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಇಂದು ಒಂದೇ ದಿನ 27,773 ಮಂದಿಯ ಸೋಂಕು ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 2207 ಕೋವಿಡ್ ಪ್ರಕರಣ:
ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ 2207 ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 29,091 ಕ್ಕೆ ಏರಿಕೆಯಾಗಿದೆ. ಇಂದು 1038 ಮಂದಿ ಬಿಡುಗಡೆಯಾಗಿದ್ದು, ಚೇತರಿಕೆ ಪ್ರಮಾಣ ಶೇಕಡಾ 23.79 ರಷ್ಟಿದೆ. ಇಂದು ನಗರದಲ್ಲಿ 47 ಮಂದಿ ಸಾವನ್ನಪ್ಪಿದ್ದು ವರದಿಯಾಗಿದೆ. ಸಾವಿನ ಪ್ರಮಾಣ 1.83% ರಷ್ಟಿದೆ.
ಮೈಸೂರು:ಇಂದು 94 ವರ್ಷದ ವೃದ್ಧೆ ಸೇರಿ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 116 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಗುಣಮುಖರಾದ 38 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟಾರೆ 2,169 ಪ್ರಕರಣಗಳ ಪೈಕಿ, 731 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1,345 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 93 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಧಾರವಾಡ:ಜಿಲ್ಲೆಯಲ್ಲಿ ಇಂದು 183 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,668ಕ್ಕೇರಿದೆ. ಕೊರೊನಾಕ್ಕೆ ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಮೃತರ ಸಂಖ್ಯೆ 80ಕ್ಕೇರಿದೆ. 76 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದ್ದಾರೆ. ಜಿಲ್ಲೆಯಲ್ಲಿ 1667 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿ:ಜಿಲ್ಲೆಯಲ್ಲಿ ಇಂದು ಕೊರೊನಾ ಪಾಸಿಟಿವ್ ಸಂಖ್ಯೆ ಇನ್ನೂರರ ಗಡಿ ದಾಟಿದೆ. 229 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬಹುತೇಕವು ಐಎಲ್ಐ ಹಾಗೂ ಸಾರಿ ಪ್ರಕರಣಗಳಾಗಿವೆ. 14 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದಾರೆ. ಇಲ್ಲಿವರೆಗೆ ಸೋಂಕಿತರ ಸಂಖ್ಯೆ 3,370, ಗುಣಮುಖರಾದವರ ಸಂಖ್ಯೆ 1,895, ಮೃತಪಟ್ಟವರ ಸಂಖ್ಯೆ 49 ಹಾಗೂ ಸದ್ಯ 1426 ಪ್ರಕರಣಗಳು ಸಕ್ರಿಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರಕನ್ನಡ: ಜಿಲ್ಲೆಯಲ್ಲಿ 83 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 89 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಳಿಯಾಳದಲ್ಲಿ 50, ಭಟ್ಕಳದಲ್ಲಿ 8, ಶಿರಸಿ, ಯಲ್ಲಾಪುರದಲ್ಲಿ ತಲಾ- 6, ಕಾರವಾರ 5, ಅಂಕೋಲಾ 3, ಮುಂಡಗೋಡ, ಸಿದ್ದಾಪುರ ತಲಾ 2, ಕುಮಟಾದ ಓರ್ವರಿಗೆ ಸೋಂಕು ಪತ್ತೆಯಾಗಿದೆ. ಶಿರಸಿ- 23, ಹೊನ್ನಾವರ-16, ಮುಂಡಗೋಡ, ಕುಮಟಾ ತಲಾ -14, ಹಳಿಯಾಳ- 9, ಕಾರವಾರ- 6, ಸಿದ್ದಾಪುರ-4, ಭಟ್ಕಳ- 2 ಹಾಗೂ ಯಲ್ಲಾಪುರದಲ್ಲಿ ಓರ್ವರ ವರದಿ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಒಟ್ಟು 1418 ಸೋಂಕಿತರು ಪತ್ತೆಯಾಗಿದ್ದು, 705 ಮಂದಿ ಗುಣಮುಖರಾಗಿದ್ದಾರೆ. 13 ಮಂದಿ ಈವರೆಗೆ ಸಾವನ್ನಪ್ಪಿದ್ದು, 700 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
ರಾಯಚೂರು:ಒಂದೇ ದಿನ 257 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗುವ ಮೂಲಕ ಜಿಲ್ಲೆಯ ಜನರಲ್ಲಿ ಭೀತಿ ಮೂಡಿಸಿದ್ದು, ಸೋಂಕಿತರ ಸಂಖ್ಯೆ 1395ಕ್ಕೆ ತಲುಪಿದೆ. ರಾಯಚೂರು-134, ಸಿಂಧನೂರು- 46, ಮಾನವಿ-43, ಲಿಂಗಸುಗೂರು-30, ದೇವದುರ್ಗ ತಾಲೂಕಿನಲ್ಲಿ 4 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದುವರೆಗೆ 783 ಸೋಂಕಿತರು ಗುಣಮುಖರಾಗಿದ್ದರೆ, 17 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಷ್ಟೊಂದು ಪ್ರಕರಣಗಳು ಪತ್ತೆಯಾಗಿವೆ. ಅಗ್ನಿಶಾಮಕದಳದ, ಸ್ಟೇಷನ್ ಏರಿಗೆ, ರಿಮ್ಸ್ ಸಿಬ್ಬಂದಿ, ಎಲ್ ಬಿಎಸ್ ನಗರ, ಅಗ್ನಿಶಾಮಕ ದಳ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರಿಗೆ, ಮಸರಕಲ್, ಮಾನವಿ ಪಟ್ಟದ ಇಸ್ಮಾಂನಗರ, ಕೆಇಬಿ ಕಾಲೋನಿ ಸೇರಿದಂತೆ ಹಲವರಿಗೆ ಸೋಂಕು ತಗುಲಿದೆ.
ಬಳ್ಳಾರಿ:ಗಣಿ ಜಿಲ್ಲೆಯಲ್ಲಿಂದು 156 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3101ಕ್ಕೇರಿದೆ. ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ 643 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದುವರೆಗೆ 1472 ಮಂದಿ ಗುಣಮುಖರಾಗಿದ್ದು, 67 ಮಂದಿ ಸಾವನ್ನಪ್ಪಿದ್ದಾರೆ. 1,562 ಸಕ್ರಿಯ ಪ್ರಕರಣಗಳಿವೆ. ಇಂದು 5 ಜನ ಸಾವನ್ನಪ್ಪಿದ್ದು, 36 ಮಂದಿ ಗುಣಮುಖರಾಗಿದ್ದಾರೆ.
ಹಾಸನ:ಜಿಲ್ಲೆಯಲ್ಲಿಂದು 112 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಹಾಸನ- 48, ಅರಸೀಕೆರೆ-15, ಚನ್ನರಾಯಪಟ್ಟಣ -9, ಅರಕಲಗೂಡು-6, ಸಕಲೇಶಪುರ-14, ಹೊಳೆನರಸೀಪುರ-8, ಬೇಲೂರು ತಾಲೂಕಿನಲ್ಲಿ 12 ಪ್ರಕರಣಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,239ಕ್ಕೆ ಏರಿಕೆಯಾಗಿದೆ. 653 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದರೆ, 549 ಸಕ್ರಿಯ ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 37 ಜನ ಮೃತಪಟ್ಟಿದ್ದಾರೆ.
ಕೊಪ್ಪಳ:ಜಿಲ್ಲೆಯಲ್ಲಿ ಇಂದು 40 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 639ಕ್ಕೆ ಏರಿಕೆಯಾಗಿದೆ. ಗಂಗಾವತಿ-23, ಕೊಪ್ಪಳ-2, ಕುಷ್ಟಗಿ-6 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 9 ಜನರಿಗೆ ಕೊರೊನಾ ದೃಢಪಟ್ಟಿದೆ. ಇಂದು ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 14 ಜನರು ಕೊರೊನಾ ಬಲಿಯಾಗಿದ್ದಾರೆ. ಇಂದು 48 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 395 ಜನರು ಗುಣಮುಖರಾಗಿದ್ದು, 198 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಚಿಕ್ಕಮಗಳೂರು:ಇಂದು 62 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 546ಕ್ಕೆ ಏರಿಕೆಯಾಗಿದೆ. 55 ಜನರಿಂದು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 271. ಇಂದು ದೃಢಪಟ್ಟ ಸೋಂಕಿತರ ಪೈಕಿ ಚಿಕ್ಕಮಗಳೂರು-21, ತರೀಕೆರೆ-04, ಕಡೂರು -20, ಎನ್.ಆರ್. ಪುರ -02, ಕೊಪ್ಪ-07, ಶೃಂಗೇರಿ-06, ಮೂಡಿಗೆರೆ ತಾಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೂ 14 ಜನ ಮೃತಪಟ್ಟಿದ್ದು, ಒಟ್ಟು 261 ಸಕ್ರಿಯ ಪ್ರಕರಣಗಳಿವೆ.
ಹಾವೇರಿ:ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 602ಕ್ಕೇರಿದೆ. ಶಿಗ್ಗಾವಿ-5, ಹಾವೇರಿ ಮತ್ತು ರಾಣೆಬೆನ್ನೂರಲ್ಲಿ ತಲಾ -4, ಬ್ಯಾಡಗಿ ತಾಲೂಕಿನಲ್ಲಿ ಇಬ್ಬರಿಗೆ, ಸವಣೂರು, ಹಾನಗಲ್ ಮತ್ತು ಹಿರೇಕೆರೂರು ತಾಲೂಕುಗಳಲ್ಲಿ ತಲಾ ಒಬ್ಬರಿಗೆ ಸೋಂಕು ವಕ್ಕರಿಸಿದೆ. 15 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಗುರುವಾರ ಕೊರೊನಾದಿಂದ 68 ವರ್ಷದ ವೃದ್ಧೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 20 ಕ್ಕೇರಿದೆ. 220 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ:ಜಿಲ್ಲೆಯಲ್ಲಿ ಇಂದು ಏಳು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಕೇರಳ ರಾಜ್ಯದ ಪಾಲಕ್ಕಾಡ್, ಉತ್ತರ ಕನ್ನಡ, ದಾವಣಗೆರೆ ಜಿಲ್ಲೆಯ ತಲಾ ಒಬ್ಬರು, ನಾಲ್ಕು ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 99ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು 218 ಮಂದಿಗೆ ಕೊರೊನಾ ದೃಢಪಟ್ಟಿದೆ. ಈವರೆಗೆ 4214 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇಂದು 118 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 1,862 ಮಂದಿ ಗುಣಮುಖರಾಗಿದ್ದು, 2,253 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಮರಾಜನಗರ:28 ಕೊರೊನಾ ಪಾಸಿಟಿವ್ ಕೇಸ್ ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 434ಕ್ಕೆ ಏರಿಕೆಯಾಗಿದೆ. 196 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಪತ್ತೆಯಾದ ಸೋಂಕಿತರಲ್ಲಿ ಅರ್ಧದಷ್ಟು ಮಂದಿ ಕೊಳ್ಳೇಗಾಲ ತಾಲೂಕಿನವರಾಗಿದ್ದು, ಗುಂಡ್ಲುಪೇಟೆಯಂತೆ ಕೊಳ್ಳೇಗಾಲ ಕೂಡ ಕೊರೊನಾ ಹಾಟ್ಸ್ಪಾಟ್ ಆಗುವ ಆತಂಕ ಎದುರಾಗಿದೆ.
ತುಮಕೂರು:ಜಿಲ್ಲೆಯಲ್ಲಿ ಇಂದು ಐವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 67 ಮಂದಿಯಲ್ಲಿ ಸೋಂಕು ಕಂಡು ಬಂದಿದ್ದು, ತುಮಕೂರು 26, ಸಿರಾ ನಾಲ್ವರು, ತುರುವೇಕೆರೆ ಮತ್ತು ಕುಣಿಗಲ್ ತಾಲೂಕಿನ ತಲಾ ಐವರು, ಪಾವಗಡದ 6 ಮಂದಿ, ಗುಬ್ಬಿ 9 , ತಿಪಟೂರು ಇಬ್ಬರು, ಕೊರಟಗೆರೆ ತಾಲೂಕಿನ ಒಬ್ಬರು ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. ಇದುವರೆಗೂ 488 ಮತ್ತೆ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 408 ಮಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿದೆ. 12ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೀದರ್:ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 95 ಜನರಿಗೆ ಸೋಂಕು ತಗುಲಿದ್ದು ಮೂವರು ಸಾವನ್ನಪ್ಪಿದ್ದಾರೆ. ಬೀದರ್ ತಾಲೂಕಿನ 65, 70 ವಯಸ್ಸಿನ ಪುರುಷರು ಹಾಗೂ 70 ವಯಸ್ಸಿನ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೆ 95 ಜನರಲ್ಲಿ ಕೊವಿಡ್-19 ಪಾಸಿಟಿವ್ ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 1637 ಕ್ಕೆ ಏರಿಕೆಯಾಗಿದ್ದು, 71 ಜನರು ಸಾವನಪ್ಪಿದ್ದಾರೆ. ಈ ಪೈಕಿ ಇಬ್ಬರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ:ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 34ಕ್ಕೇರಿಕೆಯಾಗಿದೆ. ಅಲ್ಲದೆ, 214 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ 1529ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ದಾಖಲೆ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಬೆಳಕಿಗೆ ಬಂದಿದ್ದು, ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ. ಈವರೆಗೆ 426 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 1,069 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ವಾರ್ಡ್ ಹಾಗೂ ಕೋವಿಡ್ ಕೇರ್ ಸೇಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾವಣಗೆರೆ:ಜಿಲ್ಲೆಯಲ್ಲಿ ಕೊರೊನಾಕ್ಕೆ ಇಬ್ಬರು ಬಲಿಯಾಗಿದ್ದು, ಮೃತರ ಸಂಖ್ಯೆ 32ಕ್ಕೇರಿದೆ. ಇಂದು ಒಂದೇ ದಿನ 107 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ 1,178 ಸೋಂಕಿತರಿದ್ದಾರೆ. ನಗರದ ಮದೀನ್ ಆಟೋ ನಿಲ್ದಾಣದ ಬಳಿ 68 ವರ್ಷದ ವೃದ್ಧ ಹಾಗೂ ಸೇವಾದಳ ಕ್ವಾರ್ಟರ್ಸ್ನ 55 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಜುಲೈ 21ರಂದು ಮೃತಪಟ್ಟಿದ್ದಾರೆ. ದಾವಣಗೆರೆಯಲ್ಲಿ 64, ಹರಿಹರ 26, ಜಗಳೂರು 6, ಚನ್ನಗಿರಿ 1, ಹೊನ್ನಾಳಿ 2 , ಹೊರ ಜಿಲ್ಲೆಯಿಂದ ಬಂದಿದ್ದ 8 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 26 ಮಂದಿ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಒಟ್ಟು ಇದುವರೆಗೆ ಜಿಲ್ಲೆಯಲ್ಲಿ 667 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 479 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಬಾಗಲಕೋಟೆ:ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, 106 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 984ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು 457 ಗುಣಮುಖರಾಗಿದ್ದಾರೆ. 491 ಪ್ರಕರಣಗಳು ಸಕ್ರಿಯವಾಗಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 38 ಮಂದಿ ಸಾವನ್ನಪ್ಪಿದ್ದಾರೆ.
ವಿಜಯಪುರ:ಜಿಲ್ಲೆಯಲ್ಲಿ ಇಂದು 20 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಲ್ಲಿಯವರೆಗೆ 1,830 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಕೊರೊನಾಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದು, ಇಂದು 57 ಮಂದಿ ಸೇರಿ ಒಟ್ಟು 1,302 ಗುಣಮುಖರಾಗಿದ್ದಾರೆ. ಸದ್ಯ 504 ಸಕ್ರಿಯ ರೋಗಿಗಳಿದ್ದು, ಒಟ್ಟೂ 24 ಜನರು ಮೃತಪಟ್ಟಿದ್ದಾರೆ.
ಗದಗ:ಜಿಲ್ಲೆಯಲ್ಲಿ ಇಂದು 72 ಕೊರೊನಾ ಕೇಸ್ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 772ಕ್ಕೆ ಏರಿಕೆಯಾಗಿದೆ. ಅಲ್ಲದೆ ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಕೋವಿಡ್-19ರ ಮಾರ್ಗಸೂಚಿಗಳನ್ವಯ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್‍ಬಾಬು ತಿಳಿಸಿದ್ದಾರೆ.
ಶಿವಮೊಗ್ಗ:ಜಿಲ್ಲೆಯಲ್ಲಿ ಮೊದಲ ಬಾರಿಗೆ 126 ಕೊರೊನಾ ಸೊಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಸೊಂಕಿತರ ಸಂಖ್ಯೆ 1,143ಕ್ಕೆ ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ 39 ಜನ ಬಿಡುಗಡೆಯಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 589 ಜನ ಸೊಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 534 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 303 ಜನ, ಕೋವಿಡ್ ಕೇರ್ ಸೆಂಟರ್ನಲ್ಲಿ 276, ಖಾಸಗಿ ಆಸ್ಪತ್ರೆಯಲ್ಲಿ 18 ಜನ ಹಾಗೂ ಮನೆಯಲ್ಲಿ 37 ಜನ ಐಸೋಲೇಷನ್ನಲ್ಲಿದ್ದಾರೆ.