ಕರ್ನಾಟಕ

karnataka

ETV Bharat / city

ಸಂಚಾರ ನಿರೀಕ್ಷಕ, ಭದ್ರತಾ ಅಧಿಕಾರಿ ಹುದ್ದೆಗೆ ನೇಮಕ ಪ್ರಕ್ರಿಯೆ ನಡೆಯುತ್ತಿಲ್ಲ: KSRTC ಸ್ಪಷ್ಟನೆ - ಪತ್ರಿಕಾ ಪ್ರಕಟಣೆ

ಕೆಎಸ್​ಆರ್​ಟಿಸಿ ನಿಗಮದಲ್ಲಿ ಸಹಾಯಕ ಸಂಚಾರ ನಿರೀಕ್ಷಕ, ಸಂಚಾರ ನಿರೀಕ್ಷಕ ಮತ್ತು ಭದ್ರತಾ ಅಧಿಕಾರಿ ಹುದ್ದೆಗಳಿಗೆ ಯಾವುದೇ ತರಹದ ಜಾಹೀರಾತು ಹೊರಡಿಸಿರುವುದಿಲ್ಲ ಹಾಗೂ ನೇಮಕಾತಿ ಪ್ರಕ್ರಿಯೆ ಸಹ ನಡೆಯುತ್ತಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KSRTC
ಕೆಎಸ್​ಆರ್​ಟಿಸಿ ನಿಗಮ

By

Published : Oct 12, 2021, 10:17 PM IST

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ)ದಲ್ಲಿ ಸಹಾಯಕ ಸಂಚಾರ ನಿರೀಕ್ಷಕ, ಸಂಚಾರ ನಿರೀಕ್ಷಕ ಮತ್ತು ಭದ್ರತಾ ಅಧಿಕಾರಿ ಹುದ್ದೆಗಳನ್ನು ಕೊಡಿಸುವುದಾಗಿ ಹಲವು ಅಭ್ಯರ್ಥಿಗಳಿಂದ ನಿಗಮಕ್ಕೆ ಸಂಬಂಧಪಡದ ವ್ಯಕ್ತಿಗಳು ಹಣ ಪಡೆದಿರುವ ಬಗ್ಗೆ ನಿಗಮದ ಗಮನಕ್ಕೆ ಬಂದಿರುತ್ತದೆ.

ಪ್ರಕಟಣೆ ಪ್ರತಿ

ನಿಗಮದಲ್ಲಿ ಸಹಾಯಕ ಸಂಚಾರ ನಿರೀಕ್ಷಕ, ಸಂಚಾರ ನಿರೀಕ್ಷಕ ಮತ್ತು ಭದ್ರತಾ ಅಧಿಕಾರಿ ಹುದ್ದೆಗಳಿಗೆ ಯಾವುದೇ ತರಹದ ಜಾಹೀರಾತು ಹೊರಡಿಸಿರುವುದಿಲ್ಲ ಹಾಗೂ ನೇಮಕಾತಿ ಪ್ರಕ್ರಿಯೆ ಸಹ ನಡೆಯುತ್ತಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಗಮದಲ್ಲಿ ನಡೆಯುವಂತಹ ಎಲ್ಲಾ ನೇಮಕಾತಿಗಳಿಗೆ ಸಂಬಂಧಿಸಿದಂತೆ ಜಾಹೀರಾತುಗಳನ್ನು ಪ್ರಮುಖ ದಿನ ಪತ್ರಿಕೆಗಳಲ್ಲಿ ಹಾಗೂ ನಿಗಮದ ಅಧಿಕೃತ ವೆಬ್‌ಸೈಟ್ WWW.Ksrtcjobs.com ನಲ್ಲಿ ಪ್ರಕಟಿಸಲಾಗುತ್ತದೆ. ಹಾಗೂ ಎಲ್ಲ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಸ್ವೀಕರಿಸಿ ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ಪದವಿ ಮತ್ತು ನೇಮಕಾತಿ ನಿಯಮಾವಳಿಗಳನ್ವಯ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ.

ಹಾಗೆಯೇ ನಿಗಮದಲ್ಲಿ ಆಯ್ಕೆ ಮಾಡುವ ಎಲ್ಲಾ ಹುದ್ದೆಗಳ ನೇಮಕಾತಿಯಲ್ಲಿ ಯಾವುದೇ ತರಹದ ಅಕ್ರಮ - ಅವ್ಯವಹಾರಗಳಿಗೆ ಅವಕಾಶ ಇರುವುದಿಲ್ಲ. ದರ ನಿಗಮದಲ್ಲಿ ಯಾವುದೇ ಹುದ್ದೆಯನ್ನು ಕೊಡಿಸುವುದಾಗಿ ಆಮಿಷವೊಡ್ಡಿದಲ್ಲಿ ಕೂಡಲೇ ಕೇಂದ್ರ ಕಚೇರಿಯನ್ನು ಸಂಪರ್ಕಿಸಬೇಕು ಅಥವಾ ಮೊಬೈಲ್ ಸಂಖ್ಯೆ:7760990060, 7760990095 ಮತ್ತು 776090011 ಗಳಿಗೆ ಸಂಪರ್ಕಿಸಿ ಮಾಹಿತಿಯನ್ನ ನೀಡಬೇಕು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೇಮಕಾತಿಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ನಿಗಮದ ವೆಬ್‌ಸೈಟ್ www.ksrtcjobs.com ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details