ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿಂದು 1,694 ಮಂದಿಗೆ ಕೋವಿಡ್ ದೃಢ : ಸೋಂಕಿಗೆ ಒಬ್ಬರು ಬಲಿ - ಈಟಿವಿ ಭಾರತ್​ ಕನ್ನಡ

ರಾಜ್ಯದಲ್ಲಿಂದು ಕೋವಿಡ್ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 1,105 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಕೋವಿಡ್
ಕೋವಿಡ್

By

Published : Aug 6, 2022, 9:01 PM IST

ಬೆಂಗಳೂರು : ರಾಜ್ಯದಲ್ಲಿ ಇಂದು 28,118 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,694 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1,741 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39,66,739 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 11,355 ಏರಿಕೆಯಾಗಿದೆ.

ಈ ಮೂಲಕ ಸೋಂಕಿತರ ಪ್ರಮಾಣ ಶೇ. 6.02 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 6.33 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 6,79,95,010. ವಾರದ ಸಾವಿನ ಪ್ರಮಾಣ ಶೇ. 0.09 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು 8,922 ಮಂದಿ ತಪಾಸಣೆಗೆ ಒಳಪಟ್ಟಿದ್ದು, ಇದುವರೆಗೂ 13,29,704 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 1,105 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,43,674 ಕ್ಕೆ ಏರಿಕೆ ಆಗಿದೆ. ಇಂದು 1,347 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 18,18,601 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯವಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,096 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,976 ರಷ್ಟಿದೆ.

ಇದನ್ನೂ ಓದಿ :ರಾಮನಗರದಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..

ABOUT THE AUTHOR

...view details