ಬೆಂಗಳೂರು :ರಾಜ್ಯದಲ್ಲಿ ಇಂದು 79,177 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 332 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,81,732 ಏರಿಕೆ ಆಗಿದೆ.
ಇಂದು 515 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 29,34,085 ಮಂದಿ ಗುಣಮುಖರಾಗಿದ್ದಾರೆ. 11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37,906ಕ್ಕೆ ಏರಿಕೆಯಾಗಿದೆ. ಉಳಿದಂತೆ 9,712 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪ್ರಮಾಣ ಶೇ.0.41ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.3.31ರಷ್ಟಿದೆ.