ಬೆಂಗಳೂರು: ನಗರದಲ್ಲಿ ಇಂದು ಮತ್ತು ನಾಳೆ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿದಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಎಚ್.ಎಸ್. ಪಾಟೀಲ ತಿಳಿಸಿದ್ದಾರೆ.
ವಿಜಯಪುರದಲ್ಲಿ ಕನಿಷ್ಠ ತಾಪಮಾನ 12.2 ಡಿಗ್ರಿ ದಾಖಲಾಗಿದೆ. ಬೆಳಗಾವಿಯಲ್ಲಿ 12.6 ಡಿಗ್ರಿ, ಶಿವಮೊಗ್ಗ 13.6 ಡಿಗ್ರಿ , ದಾವಣಗೆರೆ 12.3 ಡಿಗ್ರಿ, ಧಾರವಾಡ 14 ಡಿಗ್ರಿ, ಹಾವೇರಿ 14.4 ಡಿಗ್ರಿ ತಾಪಮಾನ ದಾಖಲಾಗಿದೆ. ಕರಾವಳಿಯಲ್ಲಿ ಇಂದು ಒಣ ಹವೆ ಮುಂದುವರೆಯಲಿದ್ದು ನವೆಂಬರ್ 13 ಮತ್ತು 14 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.