ಬೆಂಗಳೂರು:ರಾಜ್ಯದ ಹವಾಮಾನ ವರದಿಯಂತೆ ಇಂದಿನಿಂದ ನಾಳೆ ಬೆಳಗ್ಗೆ 8-30ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಉಸ್ತುವಾರಿ ವಿಕೋಪ ಕೇಂದ್ರ ವರದಿ ನೀಡಿದೆ.
ನಾಳೆ ಬೆಳಗ್ಗೆಯವರೆಗೆ ಕರಾವಳಿಯಲ್ಲಿ ಭಾರೀ ಮಳೆ: ಹವಾಮಾನ ವರದಿ - ಕರಾವಳಿಯಲ್ಲಿ ಮಳೆ
ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ನಾಳೆ ಬೆಳಗ್ಗೆಯವರೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ಉಸ್ತುವಾರಿ ವಿಕೋಪ ಕೇಂದ್ರ ವರದಿ ನೀಡಿದೆ.
ಹವಾಮಾನ ವರದಿ
ಈಗಾಗಲೇ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ. ನಿನ್ನೆ ಸಂಜೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಇಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ವರ್ಷಧಾರೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ.