ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜುಲೈ 28 ರಿಂದ 31 ರವರೆಗೆ ವ್ಯಾಪಕ ಮಳೆಯಾಗಬಹುದು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಾಳೆಯಿಂದ 31 ರ ವರೆಗೆ ಕೆಲವು ಕಡೆ ಭಾರೀ ಮಳೆ ನಿರೀಕ್ಷಿಸಿರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಉತ್ತಮ ಮಳೆ ದ.ಒಳನಾಡು ಹಾಗೂ ಉ.ಒಳನಾಡಿನಲ್ಲಿ ಇಂದು ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, 28 ರಿಂದ 31 ರ ವರೆಗೆ ಮಳೆ ಪ್ರಮಾಣ ಹೆಚ್ಚಾಗಬಹುದು. ಜುಲೈ 28 ರಿಂದ 31 ರವರೆಗೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಬಹುದು. ಜುಲೈ 31 ರಂದು ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ್ ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜುಲೈ 29 ರಂದು ಚಿದ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಂಗಳೂರು, ಶಿವಮೊಗ್ಗ, ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 30 ಹಾಗೂ 31 ರಂದು ಶಿವಮೊಗ್ಗ, ಚಿಕ್ಕಮಂಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 27 ಹಾಗೂ 28 ರಂದು ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಮುನ್ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿಂದು ಮಾನ್ಸೂನ್ ಮಳೆ ರಾಜ್ಯಾದ್ಯಂತ ದುರ್ಬಲವಾಗಿದೆ. ಕರಾವಳಿ ಪ್ರದೇಶದಲ್ಲಿ ಹಗುರದಿಂದ ಕೂಡಿದ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಹೊನ್ನಾವರದಲ್ಲಿ 4 ಸೆಂ.ಮೀ, ಶಿರಾದಲ್ಲಿ 3.8, ಬೆಳಗಾವಿ 3 ಮಿ.ಮೀ, ಮೈಸೂರು 3 ಸೆಂ.ಮೀಟರ್ ಮಳೆಯಾಗಿದೆ.