ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆರ್ಭಟ..!

ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ ನಾಲ್ಕು ದಿನ ಮುಂದುವರಿಯಲಿದ್ದು, ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯೇ ಇದಕ್ಕೆ ಕಾರಣ ಎನ್ನಲಾಗ್ತಿದೆ.

karnataka-weather-report
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮುಂದುವರೆಯಲಿರುವ ವರ್ಷಧಾರೆ

By

Published : Apr 21, 2022, 10:29 AM IST

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನಗಳ ಕಾಲ ಮುಂದುವರಿಯಲಿದೆ. ಬುಧವಾರ ವಿವಿಧೆಡೆ ಮಳೆ ಸುರಿದಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಏಪ್ರಿಲ್ 22 ರಿಂದ 24ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಡಿಕೆಗಿಂತ ಹೆಚ್ಚು ಮಳೆ:ಏಪ್ರಿಲ್ 14ರಿಂದ 20ರವರೆಗೆ ರಾಜ್ಯದಲ್ಲಿ ವಾಡಿಕೆಯ 8 ಮಿ.ಮೀ ಬದಲಾಗಿ 28 ಮಿ.ಮೀ ಮಳೆ ಸುರಿದಿದೆ. ಒಟ್ಟು ಶೇಕಡಾ 243ಕ್ಕೂ ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 34.1 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 23.2 ಡಿಗ್ರಿ ಸೆಲ್ಸಿಯಸ್ ಇದೆ.

ಇದನ್ನೂ ಓದಿ:ಮೆಟ್ರೋ ಕಾಮಗಾರಿ: ಮರಗಳನ್ನು ಕಡಿಯಲು ಸಮ್ಮತಿ ನೀಡಿದ ಹೈಕೋರ್ಟ್

ABOUT THE AUTHOR

...view details