ಬೆಂಗಳೂರು:ಬಾಲಿವುಡ್ನ ಬಹುನಿರೀಕ್ಷಿತ ಚಿತ್ರ '83' ಪ್ರೇಕ್ಷಕರನ್ನು ತುದಿಗಾಲ ಮೇಲೆ ನಿಲ್ಲಿಸಿದೆ. ಯಾಕಂದ್ರೆ ಭಾರತಕ್ಕೆ ಮೊದಲ ಕ್ರಿಕೆಟ್ ವಿಶ್ವಕಪ್ ಬಗೆಗಿನ ಸಿನಿಮಾ. 1983ರಲ್ಲಿ ಭಾರತ ಕ್ರಿಕೆಟ್ ತಂಡ, ಮೊದಲ ವಿಶ್ವಕಪ್ ಗೆದ್ದ ಬಗ್ಗೆ, 83 ಸಿನಿಮಾ ಬರುತ್ತಾ ಇದ್ದು ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.
ವಿಶ್ವಕಪ್ ಗೆಲ್ಲಿಸಿಕೊಂಡ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಜೀವನ ಹಾಗೂ ನಾಯಕ್ವದ ಕಥೆ ಆಧರಿಸಿರುವ 83 ಸಿನಿಮಾದಲ್ಲಿ ರಣವೀರ್ ಸಿಂಗ್ ಕಪಿಲ್ದೇವ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೇ ಡಿಸೆಂಬರ್ 24 ರಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಿನಿಮಾ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಿ 83 ಸಿನಿಮಾವನ್ನ ಕಿಚ್ಚ ಸುದೀಪ್, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ತಮ್ಮ ಬಾಲ್ಯದ ಕತೆಯನ್ನು ಕಿಚ್ಚ ಸುದೀಪ್, ಕಪಿಲ್ ದೇವ್ ಮುಂದೆ ಹಂಚಿಕೊಂಡಿದ್ದಾರೆ.
ಹೌದು, 1987 ರ ಸಮಯ ಇರಬಹುದು. ವೆಸ್ಟ್ ಇಂಡೀಸ್ ತಂಡ ಬೆಂಗಳೂರಿಗೆ ಟೆಸ್ಟ್ ಆಡಲು ಬಂದಿತ್ತು. ಆಗ ಕಪಿಲ್ದೇವ್ ನಾಯಕತ್ವದ ಭಾರತ ತಂಡ ಬೆಂಗಳೂರಿಗೆ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಉಳಿದುಕೊಂಡಿತ್ತು. ನಾನು ಕಪಿಲ್ ಅವರನ್ನು ನೋಡುವ ಆಸೆಯಿಂದ ಹೋಟೆಲ್‌ಗೆ ಹೋಗಿದ್ದೆ. ಆಗ ಕಪಿಲ್ ದೇವ್ ಹಾಗೂ ತಂಡ ಹೋಟೆಲ್ ಒಳಗೆ ಹೋಗಬೇಕಾದರೆ ನಾನು ಅವರ ಹಿಂದೆ ಓಡಿದ್ದೆ.
ಕಪಿಲ್ ದೇವ್ ಅವರ ಶರ್ಟ್ ಎಳೆದೆ ಅವರು ನಿಂತು ಏನೆಂದು ಕೇಳಿದರು. ಫೋಟೊ ಬೇಕೆಂದು ನಾನು ಹೇಳಿದೆ. ತೆಗೆಯುವವರು ಯಾರು? ಎಂದು ಕಪಿಲ್ ಕೇಳಿದರು. ನನ್ನ ಅಕ್ಕ ತೆಗೆಯುತ್ತಾರೆ ಎಂದೆ. ಆಕೆಯೂ ನನ್ನ ಹಿಂದೆ ಓಡೋಡಿ ಬಂದಿದ್ದಳು ಎಂದು ನೆನಪು ಮಾಡಿಕೊಂಡರು.