ಕರ್ನಾಟಕ

karnataka

ETV Bharat / city

ಕಿದ್ವಾಯಿ ಆಸ್ಪತ್ರೆಯಲ್ಲಿ ಪ್ರೊಸ್ಟೇಟ್ ಹಾಗೂ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ

ವಿಶ್ವಮಟ್ಟದ ಸೌಲಭ್ಯಗಳನ್ನು ಒಳಗೊಂಡಿರುವ ಈ ಆಸ್ಪತ್ರೆಯಲ್ಲಿ ಪ್ರತಿದಿನ 1200 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪೆಟ್ ಸ್ಕ್ಯಾನ್ ಸೇರಿ ಪ್ರತಿ ಸೌಕರ್ಯಗಳನ್ನು ಒದಗಿಸಲಾಗಿದೆ..

dr. c ramchandra pressmeet
ಬೆಂಗಳೂರು

By

Published : Feb 5, 2021, 9:08 AM IST

ಬೆಂಗಳೂರು :ಪ್ರೊಸ್ಟೇಟ್ ಹಾಗೂ ಸ್ತನ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಹೊಸ ಯೋಜನೆ ಆರಂಭಿಸಲಾಗಿದೆ ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದರು.

ಕಿದ್ವಾಯಿ ಆಸ್ಪತ್ರೆ ವೈದ್ಯರಿಂದ ಮಾಹಿತಿ..

ನಗರದಲ್ಲಿ ಮಾತನಾಡಿದ ಅವರು, ಪ್ರೊಸ್ಟೇಟ್ ಕ್ಯಾನ್ಸರ್ ಬಗ್ಗೆ ಅರಿವು ಹಾಗೂ ಹಣಕಾಸಿನ ಅನುಕೂಲತೆಗಳನ್ನು ಒದಗಿಸಿಕೊಡುವುದು ಇದರ ಮುಖ್ಯ ಉದ್ದೇಶ. ಈ ಆಸ್ಪತ್ರೆಗೆ ಬಂದವರು ಹಣಕಾಸಿನ ಸಮಸ್ಯೆಯಿಂದ ಚಿಕಿತ್ಸೆ ಪಡೆಯದೇ ಹಿಂತಿರುಗಬಾರದು. ಹೀಗಾಗಿ, ಹೊಸ ಯೋಜನೆ ರೂಪಿಸಲಾಗಿದೆ ಎಂದರು.

ವಿಶ್ವಮಟ್ಟದ ಸೌಲಭ್ಯಗಳನ್ನು ಒಳಗೊಂಡಿರುವ ಈ ಆಸ್ಪತ್ರೆಯಲ್ಲಿ ಪ್ರತಿದಿನ 1200 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪೆಟ್ ಸ್ಕ್ಯಾನ್ ಸೇರಿ ಪ್ರತಿ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೌಲಭ್ಯಗಳನ್ನು ಹೆಚ್ಚಿಸಲಾಗುವುದು ಎಂದರು.

ABOUT THE AUTHOR

...view details