ಕರ್ನಾಟಕ

karnataka

ETV Bharat / city

ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಬೈಕ್ ಸವಾರ ಬಲಿ : ಏಕೈಕ ಪುತ್ರನ ಕಳೆದುಕೊಂಡ ಪೋಷಕರಿಂದ ದೂರು - ಬೆಂಗಳೂರಲ್ಲಿ ರಸ್ತೆ ಗುಂಡಿಯಿಂದ ಅಪಘಾತ

ಬೈಕ್ ಸವಾರ ಅಶ್ವಿನ್ ಹೆಲ್ಮೆಟ್ ಇಲ್ಲದೇ ಸವಾರಿ ಮಾಡಿರೋದು ಬೆಳಕಿಗೆ ಬಂದಿದೆ. ಎಫ್​ಐಆರ್​​ನಲ್ಲಿ ಈ ಅಂಶ ಸೇರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ‌. ಡ್ರಿಂಕ್​ ಅಂಡ್ ಡ್ರೈವ್ ಬಗ್ಗೆ ರಿಪೋರ್ಟ್ ಬರಬೇಕಿದೆ. ಆ ಬಳಿಕ ಮತ್ತೊಂದು ಎಫ್​ಐಆರ್ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಉತ್ತರ ವಲಯ ಟ್ರಾಫಿಕ್ ಡಿಸಿಪಿ ಸವಿತಾ ತಿಳಿಸಿದ್ದಾರೆ..

ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು
ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು

By

Published : Mar 14, 2022, 1:33 PM IST

Updated : Mar 15, 2022, 9:10 AM IST

ಬೆಂಗಳೂರು :ರಾಜಧಾನಿಯಲ್ಲಿ ರಸ್ತೆ ಗುಂಡಿಗೆ ಮತ್ತೊಬ್ಬ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌.

ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ಭಾನುವಾರ ರಾತ್ರಿ ರಸ್ತೆ ಗುಂಡಿಗೆ ಬಿದ್ದ ಪರಿಣಾಮ ಗಾಯಗೊಂಡಿದ್ದ 27 ವರ್ಷದ ಯುವಕ ಅಶ್ವಿನ್ ಎಂಬಾತ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಬೈಕ್ ಸವಾರ ಬಲಿ

ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಯಿಂದಾಗ ಅಪಘಾತ ಸಂಭವಿಸಿದೆ. ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಅಶ್ವಿನ್ ಬಿದ್ದ ಜಾಗದಲ್ಲಿ ಆತನ ಸ್ನೇಹಿತರು ಕುಳಿತು ಪ್ರತಿಭಟಿಸಿದರು.

ಹಾವೇರಿ ಮೂಲದ ಅಶ್ವಿನ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪೋಷಕರಿಗೆ ಒಬ್ಬನೇ ಮಗ ಎಂದು ತಿಳಿದು ಬಂದಿದೆ. ಯಲಹಂಕ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.‌ ಮೃತನ ಪೋಷಕರು ಬಿಬಿಎಂಪಿ, ಬಿಡ್ಲ್ಯೂಎಸ್​ಎಸ್‌ಬಿ ವಿರುದ್ಧ ದೂರು ದಾಖಲಿಸಿದ್ದಾರೆ.

ಬೈಕ್ ಸವಾರ ಅಶ್ವಿನ್ ಹೆಲ್ಮೆಟ್ ಇಲ್ಲದೇ ಸವಾರಿ ಮಾಡಿರೋದು ಬೆಳಕಿಗೆ ಬಂದಿದೆ. ಎಫ್​ಐಆರ್​​ನಲ್ಲಿ ಈ ಅಂಶ ಸೇರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ‌. ಡ್ರಿಂಕ್​ ಅಂಡ್ ಡ್ರೈವ್ ಬಗ್ಗೆ ರಿಪೋರ್ಟ್ ಬರಬೇಕಿದೆ. ಆ ಬಳಿಕ ಮತ್ತೊಂದು ಎಫ್​ಐಆರ್ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಉತ್ತರ ವಲಯ ಟ್ರಾಫಿಕ್ ಡಿಸಿಪಿ ಸವಿತಾ ತಿಳಿಸಿದ್ದಾರೆ.

(ಇದನ್ನೂ ಓದಿ: ಕ್ರೀಡಾಂಗಣಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು‌ ಪೊಲೀಸ್​ ವಶಕ್ಕೆ)

Last Updated : Mar 15, 2022, 9:10 AM IST

ABOUT THE AUTHOR

...view details