ಬೆಂಗಳೂರು : ಪುಲ್ವಾಮದಲ್ಲಿ ನಡೆದಿರುವ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಗರದ ಟೌನ್ ಹಾಲ್ ಮುಂಭಾಗ ಕ್ಯಾಂಡಲ್ ಬೆಳಗಿಸಿ ಮೌನಾಚರಣೆ ಮಾಡುವ ಮೂಲಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಸಾರ್ವಜನಿಕರು ನಮನ ಸಲ್ಲಿಸಿದ್ದಾರೆ.
ಮುಳ್ಳನ್ನು ಮುಳ್ಳಿಂದಲೇ ತೆಗೆಯಿರಿ... ಮತ್ತೊಂದು ಸರ್ಜಿಕಲ್ ಸ್ಟ್ರೈಕ್ಗೆ ಜನರ ಒತ್ತಾಯ - ಹುತಾತ್ಮ
ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಗರದ ಟೌನ್ ಹಾಲ್ ಮುಂಭಾಗ ಮೌನಾಚರಣೆ ಸಲ್ಲಿಸಲಾಯಿತು.
ಹುತಾತ್ಮ
ಹುತಾತ್ಮರಾದ ಸೈನಿಕರನ್ನು ನೆನೆದು ಅಮರ್ ರಹೇ ಎನ್ನುತ್ತಾ ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು. ಇದಕ್ಕೆ ಉತ್ತರ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಆಗಿರಬೇಕು. ಈ ಬಗ್ಗೆ ಪ್ರಧಾನಿ ಮೋದಿ ಅವರು ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.