ಕರ್ನಾಟಕ

karnataka

ETV Bharat / city

ಕಾಂಗ್ರೆಸ್​​ಗೆ ಗುಡ್ ಬೈ ಹೇಳಿದ ಕೋಲಾರ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವಂತೆ ಕೆಲವು ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಕೋಲಾರದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಾರೆಡ್ಡಿ ಸೇರಿ ಹಲವರು ಇಂದು ಬಿಜೆಪಿ ಪಾಳಯಕ್ಕೆ ಸೇರಿಕೊಂಡಿದ್ದಾರೆ..

Kolar Congress leaders joined BJP Today
ಕಾಂಗ್ರೆಸ್​​ಗೆ ಗುಡ್ ಬೈ ಹೇಳಿದ ಕೋಲಾರ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ

By

Published : Nov 27, 2021, 3:43 PM IST

ಬೆಂಗಳೂರು :ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಾರೆಡ್ಡಿ ಕಾಂಗ್ರೆಸ್​​ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಚಂದ್ರಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.

ಚಂದ್ರಾರೆಡ್ಡಿ, ಕೆಜಿಎಫ್ ವಿಧಾನಸಭಾ ಕ್ಷೇತ್ರದ ಮುಖಂಡ ಶ್ರೀನಿವಾಸ್ ಹಾಗೂ ಬಂಗಾರಪೇಟೆ ಕ್ಷೇತ್ರದ ಕಪಾಲಿ ಶ್ರೀನಿವಾಸ್​ ಅವರು ಕಾಂಗ್ರೆಸ್ ತೊರೆದು ಸಚಿವ ಡಾ.ಕೆ.ಸುಧಾಕರ್ ಹಾಗೂ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವಂತೆ ಕೋಲಾರ-ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಪರ ಸಚಿವರಾದ ಡಾ.ಕೆ.ಸುಧಾಕರ್ ಮತ್ತು ಮುನಿರತ್ನ ಅವರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಇದರ ಬೆನ್ನಲ್ಲೇ, ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿರುವುದು ಮತ್ತಷ್ಟು ಬಲ ಬಂದಂತಾಗಿದೆ. ಈಗಾಗಲೇ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚಂದ್ರಾರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:KIMS high alert: ಎರಡೂ ಡೋಸ್ ಕೋವಿಡ್​ ಲಸಿಕೆ ಪಡೆದವರಿಗೆ ಮಾತ್ರ ಆಸ್ಪತ್ರೆಗೆ ಎಂಟ್ರಿ!

ABOUT THE AUTHOR

...view details