ಬೆಂಗಳೂರು:ಸಿಎಂ ನಿವಾಸ ಇಂದು ರಾಜಕೀಯ ಚಟುವಟಿಕೆಗಳು ಕೇಂದ್ರ ಬಿಂದುವಾಗಿದ್ದು, ಶಾಸಕರು, ಮುಖಂಡರ ಭೇಟಿ ಬೆಳಗಿನಿಂದ ಮುಂದುವರೆದಿದೆ.
ಕೊಳ್ಳೇಗಾಲ ಕ್ಷೇತ್ರಕ್ಕೆ ಬಿಎಸ್ವೈ ಕೊಡುಗೆ ಅಪಾರ, ಬಿಜೆಪಿ ಸೇರ್ಪಡೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಶಾಸಕ ಎನ್.ಮಹೇಶ್ ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ನಾನು ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಅವರು ನನಗೆ ತುಂಬಾ ಸಹಾಯ ಮಾಡಿದ್ದು, ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.
ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಯಕರ್ತರು ಬಿಜೆಪಿ ಸೇರಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ, ನಾನಿನ್ನೂ ನಿರ್ಧಾರ ಮಾಡಿಲ್ಲ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಬೇಕು ಎನ್ನುವುದು ನನ್ನ ಅಭಿಪ್ರಾಯವಾಗಿತ್ತು. ಆದರೆ, ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಹೀಗಾಗಿ, ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ:ರಾಜೀನಾಮೆ ಬಳಿಕ ಯಾವುದೇ ಗೊಂದಲ, ಆತಂಕದಲ್ಲಿ ಬಿಎಸ್ವೈ ಇಲ್ಲ: ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್