ಬೆಂಗಳೂರು:ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇವೆ: ಡಿಕೆಶಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಘೋಷಣೆಯಾಗಿದೆ. ಈಗಾಗಲೇ ಕ್ಷೇತ್ರದ ನಾಯಕರ ಜೊತೆಗೆ ಒಂದು ಸುತ್ತು ಮಾತನಾಡಿದ್ದೇವೆ. ಆರ್ಆರ್ನಗರ ಉಪ ಚುನಾವಣೆ ಪ್ರತಿಷ್ಠೆ ಏನೂ ಇಲ್ಲ. ಚುನಾವಣೆ ನಡೆಯುವ ಪ್ರತೀ ಕ್ಷೇತ್ರ ಪ್ರತಿಷ್ಠೆ. ಎಲ್ಲರಿಗೂ ಜವಾಬ್ದಾರಿಯಿದೆ.
ನಾನು ಕೆಪಿಸಿಸಿ ಅಧ್ಯಕ್ಷ ಆಗಿದ್ದರೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಈ ಹಿಂದೆ ಕೂಡ ಚುನಾವಣೆಗೆ ಕೆಲಸ ಮಾಡಿದ್ದೇವೆ, ಈಗಲೂ ಮಾಡುತ್ತೇವೆ ಎಂದರು. ಆರ್ಆರ್ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಚರ್ಚಿಸುತ್ತೇವೆ.
ಸದ್ಯ ರಾಜರಾಜೇಶ್ವರಿನಗರ ಕ್ಷೇತ್ರದ ಟಿಕೆಟ್ಗೆ ಯಾರೂ ಅರ್ಜಿ ಹಾಕಿಲ್ಲ. ಚುನಾವಣೆಯಲ್ಲಿ ಯಾರ ಜೊತೆಗೂ ಹೊಂದಾಣಿಕೆಯಿಲ್ಲ. ಅವರವರ ಪಾರ್ಟಿ ವಿಚಾರ ಅವರವರಿಗೆ ಎಂದು ತಿಳಿಸಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪಿನ ವಿಚಾರವಾಗಿ ಮಾತನಾಡಿ, ಈ ವಿಷಯದಲ್ಲಿ ಇಡೀ ದೇಶದಲ್ಲಿ ಒಂದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಬೇಕು ಅಂತಾ ನಮ್ಮ ರಾಷ್ಟ್ರೀಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ಮಾತನಾಡಿದ ನಂತರ ನಾವು ಈ ಕುರಿತು ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ.