ಕರ್ನಾಟಕ

karnataka

ETV Bharat / city

ಬಡವರಿಗೆ ನೆರವಾಗುವ ಅನುಭವವಾಗಲಿ, ಮನಸ್ಥಿತಿಯಾಗಲಿ ಸರ್ಕಾರಕ್ಕಿಲ್ಲ : ಡಿಕೆಶಿ - ಡಿಕೆಶಿ

ಉಪಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಬಂಡಾಯ ಅಭ್ಯರ್ಥಿಯನ್ನು ಸ್ಪರ್ಧೆಯಿಂದ ಹಿಂದೆ ಸರಿಸಿರುವುದು ಅವರ ತಂತ್ರಗಾರಿಕೆ. ಅವರ ರಾಜಕೀಯ ತಂತ್ರಗಾರಿಕೆ ಅವರು ಮಾಡಿಕೊಳ್ಳಲಿ. ಅವರು ಯಾರನ್ನಾದರೂ ಅಭ್ಯರ್ಥಿ ಮಾಡಲಿ. ಯಾರ ಮನಸ್ಸಾದರೂ ಓಲೈಸಲಿ. ಅದಕ್ಕೂ ನಮಗೂ ಸಂಬಂಧವಿಲ್ಲ. ಅವರ ಪಕ್ಷ ರಾಜಕಾರಣದ ಗೊಡವೆ ನಮಗೆ ಬೇಡ..

DK Shivakumar
ಡಿ.ಕೆ. ಶಿವಕುಮಾರ್

By

Published : Oct 12, 2021, 4:29 PM IST

ಬೆಂಗಳೂರು :ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಕಾಲದಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಕಲ್ಲಿದ್ದರು ಕೊರತೆ, ವಿದ್ಯುತ್ ಕಡಿತ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿರುವುದು..

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ರಾಜ್ಯದಲ್ಲಿ ವಿದ್ಯುತ್ ಅಭಾವ ಇದೆ ಎಂದು ಬಿಂಬಿಸಿದರೆ ಬಂಡವಾಳ ಹೂಡಿಕೆದಾರರು ಹಿಂಜರಿಯುತ್ತಾರೆ.

ಈ ಸರ್ಕಾರ ಸತ್ತವರಿಗೇ ಪರಿಹಾರ ನೀಡಿಲ್ಲ. ಇನ್ನು ನೆರೆ ಸಂತ್ರಸ್ತರಿಗೆ ಕೊಡುತ್ತಾರೆಯೇ? ಈ ಸರ್ಕಾರಕ್ಕೆ ಬಡವರಿಗೆ ನೆರವಾಗುವ ಅನುಭವವಾಗಲಿ, ಮನಸ್ಥಿತಿಯಾಗಲಿ ಇಲ್ಲ. ರೈತರ ಬಗ್ಗೆ ಕಾಳಜಿಯಂತೂ ಮೊದಲೇ ಇಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ ವಿಚಾರ
ಸಿದ್ದರಾಮಯ್ಯ ಅವರು ರಾಷ್ಟ್ರ ಮಟ್ಟದ ರಾಜಕಾರಣಕ್ಕೆ ಹೋಗುವ ವಿಚಾರವಾಗಿ ನಮ್ಮ ಬಳಿ ಯಾವುದೇ ಚರ್ಚೆ ಆಗಿಲ್ಲ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದು ಕೇವಲ ಊಹಾಪೋಹ ಮಾತ್ರ. ಈ ವಿಚಾರವಾಗಿ ಪಕ್ಷ ಹಾಗೂ ನಮ್ಮ ಶಾಸಕಾಂಗ ಪಕ್ಷದ ನಾಯಕರು ಇದ್ದಾರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ವಿವರಿಸಿದರು.

ರಾಹುಲ್ ಸೂಕ್ತ
ಇಡೀ ದೇಶದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಅವರೇ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸದ್ಯ ರಾಹುಲ್ ಗಾಂಧಿ ಅವರೇ ಕೆಲಸ ಮಾಡುತ್ತಿದ್ದು, ಅವರ ಮುಂದಾಳತ್ವ ಬೇಕು ಎಂಬುದು ಇಡೀ ಕಾಂಗ್ರೆಸ್ ಕಾರ್ಯಕರ್ತರ ಅಪೇಕ್ಷೆ. ಪಕ್ಷದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ವಿಚಾರವಾಗಿ ಕೆಲ ಪ್ರಕ್ರಿಯೆಗಳಿವೆ. ಆ ಮೂಲಕ ಆಯ್ಕೆ ನಡೆಯುತ್ತದೆ ಎಂದರು.

ಉಪಚುನಾವಣೆಯಲ್ಲಿ ಬಿಜೆಪಿಯವರು ತಮ್ಮ ಬಂಡಾಯ ಅಭ್ಯರ್ಥಿಯನ್ನು ಸ್ಪರ್ಧೆಯಿಂದ ಹಿಂದೆ ಸರಿಸಿರುವುದು ಅವರ ತಂತ್ರಗಾರಿಕೆ. ಅವರ ರಾಜಕೀಯ ತಂತ್ರಗಾರಿಕೆ ಅವರು ಮಾಡಿಕೊಳ್ಳಲಿ. ಅವರು ಯಾರನ್ನಾದರೂ ಅಭ್ಯರ್ಥಿ ಮಾಡಲಿ. ಯಾರ ಮನಸ್ಸಾದರೂ ಓಲೈಸಲಿ. ಅದಕ್ಕೂ ನಮಗೂ ಸಂಬಂಧವಿಲ್ಲ. ಅವರ ಪಕ್ಷ ರಾಜಕಾರಣದ ಗೊಡವೆ ನಮಗೆ ಬೇಡ ಎಂದರು.

ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಮೋಟಮ್ಮ ಹಾಗೂ ಉಮಾಶ್ರೀ

ಮಾಜಿ ಸಚಿವೆಯರ ಭೇಟಿ, ಚರ್ಚೆ
ಮಾಜಿ ಸಚಿವೆಯರಾದ ಮೋಟಮ್ಮ ಹಾಗೂ ಉಮಾಶ್ರೀ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಪಕ್ಷ ಸಂಘಟನೆ, ಮಹಿಳಾ ಘಟಕದ ಕಾರ್ಯ ನಿರ್ವಹಣೆ ಸೇರಿ ಹಲವು ವಿಚಾರ ಕುರಿತು ಇದೇ ಸಂದರ್ಭ ಚರ್ಚೆ ನಡೆಯಿತು.

ABOUT THE AUTHOR

...view details