ಬೆಂಗಳೂರು:ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಜತಿನ್ನನ್ನು ವಶಕ್ಕೆ ಪಡೆದುಕೊಂಡಿದ್ದ ಸಿಸಿಬಿ ಪೊಲೀಸರು, ತೀವ್ರ ವಿಚಾರಣೆ ನಡೆಸಿದ್ದಾರೆ.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್... ಅಂತಾರಾಷ್ಟ್ರೀಯ ಮಟ್ಟದ ಬಂಧಿತ ಬುಕ್ಕಿ ಜತಿನ್ ವಿಚಾರಣೆ - bangalore news
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಜತಿನ್ನ್ನ ವಶಕ್ಕೆ ಪಡೆದುಕೊಂಡಿದ್ದ ಸಿಸಿಬಿ ಪೊಲೀಸರು, ಸೋಮವಾರ ಒಂದು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದ್ದಾರೆ.
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಹಗರಣ
ಕಮೀಷನರ್ ಕಚೇರಿಯಲ್ಲಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ತಂಡ, ಸುಮಾರು ಒಂದು ಗಂಟೆ ಕಾಲ ವಿಚಾರಣೆ ನಡೆಸಿತು. ಈ ವೇಳೆ ಆರೋಪಿಯ ಚಿಕ್ಕಪ್ಪ ಸಾಕ್ಷ್ಯಧಾರ ನಾಶ ಮಾಡಲು ಆತನ ಮೊಬೈಲ್ ಬಚ್ಚಿಟ್ಟಿದ್ದು ಬಯಲಾಗಿದೆ. ವಿಚಾರಣೆ ಬಯಲಾಗುತ್ತಿದ್ದಂತೆ ಪೊಲೀಸರು ತಮಿಳುನಾಡಿನಲ್ಲಿರುವ ಆತನ ಚಿಕ್ಕಪ್ಪನ ಮೇಲೆ ಆರೋಪಿಗೆ ಸಹಾಯ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ, ಆರೋಪಿ ವಿದೇಶಿ ಕ್ರಿಕೆಟ್ ಲೀಗ್ಗಳಲ್ಲೂ ಬೆಟ್ಟಿಂಗ್ ನಡೆಸಿರಬಹುದು ಎಂದು ಸಿಸಿಬಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.