ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಹೋಂ ಐಸೋಲೇಷನ್ನಲ್ಲಿ ಇರುವ ವಕೀಲರಿಗೆ ತಲಾ 10 ಸಾವಿರ ಹಾಗೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವಕೀಲರಿಗೆ ತಲಾ 25 ಸಾವಿರ ನೆರವು ನೀಡಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ ವಕೀಲರಿಗೆ ಕೆಎಸ್ಬಿಸಿ ಆರ್ಥಿಕ ನೆರವು - ಕರ್ನಾಟಕ ರಾಜ್ಯ ವಕೀಲರ ಪರಿಷತ್ತು
ಕೊರೊನಾ ಸಂಕಷ್ಟ ಕಾಲದಲ್ಲಿ ವಕೀಲರು ಮತ್ತು ಅವರ ಕುಟುಂಬಗಳಿಗೆ ನೆರವು ನೀಡಲು ಮುಂದಾಗಿರುವುದಾಗಿ ರಾಜ್ಯ ವಕೀಲರ ಪರಿಷತ್ತು, ಕೋವಿಡ್ ಸೋಂಕಿಗೆ ಒಳಗಾಗಿ ಹೋಂ ಐಸೋಲೇಷನ್ನಲ್ಲಿ ಇರುವ ವಕೀಲರಿಗೆ ತಲಾ 10 ಸಾವಿರ ಹಾಗೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ವಕೀಲರಿಗೆ ತಲಾ 25 ಸಾವಿರ ನೆರವು ನೀಡಲು ತೀರ್ಮಾನಿಸಿದೆ.
ಕೊರೊನಾ ಸಂಕಷ್ಟ ಕಾಲದಲ್ಲಿ ವಕೀಲರು ಮತ್ತು ಅವರ ಕುಟುಂಬಗಳಿಗೆ ನೆರವು ನೀಡಲು ರಾಜ್ಯ ಸರ್ಕಾರ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ಸೂಚನೆ ಮೇರೆಗೆ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ.
ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕೆ ವಕೀಲರು ಮತ್ತು ಅವರ ಕುಟುಂಬ ಸದಸ್ಯರು ಸಹಕಾರ ನೀಡಬೇಕು. ಅದರಂತೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜತೆಗೆ ತಪ್ಪದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕೆಎಸ್ಬಿಸಿ ಅಧ್ಯಕ್ಷ ಎಲ್. ಶ್ರೀನಿವಾಸ್ ಬಾಬು ಅವರು ಮನವಿ ಮಾಡಿದ್ದಾರೆ. ಅಲ್ಲದೇ ಕೊರೊನಾ ಸಂಕಷ್ಟ ಕಾಲದಲ್ಲಿ ರಾಜ್ಯ ವಕೀಲರ ಪರಿಷತ್ತು ಗರಿಷ್ಠ ನೆರವು ನೀಡಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.