ಕರ್ನಾಟಕ

karnataka

ETV Bharat / city

'ಬಿಜೆಪಿ ಅಪರೇಷನ್‌ ಕಮಲವನ್ನೇ ನೆಚ್ಚಿಕೊಂಡ ವಿನಾಶಕಾರಿ ಪಕ್ಷ': ಕುಮಾರಸ್ವಾಮಿ ಟ್ವೀಟ್​ ಸಮರ

ಅಪರೇಷನ್‌ ಕಮಲವನ್ನೇ ನೆಚ್ಚಿಕೊಂಡ ವಿನಾಶಕಾರಿ ಪಕ್ಷ ಬಡ ಯುವಕರ ರಕ್ತವೇ ಅದರ ಪಾಲಿನ ʼಅಧಿಕಾರಾಮೃತʼ. ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ? ಎಂದು ಬಿಜೆಪಿಗೆ ಹೆಚ್.​ಡಿ.ಕುಮಾರಸ್ವಾಮಿ ಕುಟುಕಿದ್ದಾರೆ.

kumaraswamy-tweet-against-bjp
ಕುಮಾರಸ್ವಾಮಿಯಿಂದ ಟ್ವೀಟ್​ ಸಮರ

By

Published : Aug 2, 2022, 10:29 PM IST

ಬೆಂಗಳೂರು :ನಾಗಮಂಗಲದ ಜೆಡಿಎಸ್ ಸಮಾವೇಶದ ವೇದಿಕೆಯಲ್ಲಿ ಕುಮಾರಸ್ವಾಮಿ ಮತ್ತು ರೇವಣ್ಣ ಅವರು ಹೆಚ್​.ಡಿ.ದೇವೇಗೌಡರ ವಿಡಿಯೋ ನೋಡಿ ಅತ್ತಿದ್ದರು. ಈ ಬಗ್ಗೆ ರಾಜಕೀಯವಾಗಿ ಟೀಕೆ ಟಿಪ್ಪಣಿಗಳು ಹರಿದಾಡಿದವು. ಈ ಬಗ್ಗೆ ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡಿದ್ದಾರೆ.

ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು ಬಿಜೆಪಿ ವಿಕೃತವಾಗಿ ತಿರುಚಿದೆ. ಇನ್ನೊಬ್ಬರ ಕಣ್ಣೀರಿನ ಬಗ್ಗೆ ಇದೆಂಥಾ ವಿಕಾರ? ಇದೇನಾ ಸಂಘ ಕಲಿಸಿದ ಸಂಸ್ಕಾರ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ವಿಲಕ್ಷಣ, ವಿಕೃತ ಪಕ್ಷ. ಭೀಭತ್ಸ ಬಿಜೆಪಿ. ಅಪರೇಷನ್‌ ಕಮಲವನ್ನೇ ನೆಚ್ಚಿಕೊಂಡ ವಿನಾಶಕಾರಿ ಪಕ್ಷ. ಕಗ್ಗೊಲೆಗಳೇ ಅದರ ಕಸುಬು, ಬಡ ಯುವಕರ ರಕ್ತವೇ ಅದರ ಪಾಲಿನ 'ಅಧಿಕಾರಾಮೃತ'. ಅದೆಷ್ಟು ಹೆತ್ತ ಕರುಳುಗಳು ಕಣ್ಣೀರಿಡುತ್ತಿವೆ. ಅದಕ್ಕೆ ಉತ್ತರ ಕೊಡುವ ನೈತಿಕತೆ ಇದೆಯಾ? ಆಮೇಲೆ ನನ್ನ ಕಣ್ಣೀರ ಬಗ್ಗೆ ಮಾತನಾಡಿ ಎಂದಿದ್ದಾರೆ.

30 ಸೀಟು ಉಳಿಸಿಕೊಳ್ಳಲು ನಾವು ಹೆಣಗುತ್ತಿದ್ದೇವೆ ಎನ್ನುತ್ತೀರಿ. ಅಧಿಕಾರಕ್ಕಾಗಿ ಇದೇ 30 ಸೀಟಿನ ಪಕ್ಷದ ಬಾಗಿಲಿಗೆ ಬಂದು ನಿಂತಿದ್ದನ್ನು ಮರೆತುಬಿಟ್ಟಿರಾ? ಇಡೀ ದೇಶದ ತುಂಬೆಲ್ಲ ಆಪರೇಷನ್‌ ಕಮಲದ ಗಬ್ಬುನಾತ ಹಬ್ಬಿದೆ. ಅಸಹ್ಯ ಎನಿಸುವುದಿಲ್ಲವೇ ನಿಮಗೆ? ಎಂದು ಆಪರೇಷನ್​ ಕಮಲದಿಂದಾಗಿ ಹಲವು ರಾಜ್ಯಗಳಲ್ಲಿ ಬಿಜೆಪಿ ಚುಕ್ಕಾಣಿ ಹಿಡಿದಿರುವ ಬಗ್ಗೆ ಟೀಕಿಸಿದ್ದಾರೆ.

ಇದನ್ನೂ ಓದಿ:ಅವರೇ ಸಾಕಿದ ಆ ಸಂಘಟನೆಗಳನ್ನು ಅವರೇ ಕಿತ್ತು ಹಾಕಲಿ: ಸಿದ್ದರಾಮಯ್ಯ ಸವಾಲು

ABOUT THE AUTHOR

...view details