ಕರ್ನಾಟಕ

karnataka

ETV Bharat / city

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕುರುಬ ಶ್ರೀಗಳ ನಿಯೋಗದಿಂದ ಸಿಎಂಗೆ ಮನವಿ

ಕುರುಬ ಅಭಿವೃದ್ಧಿ ನಿಗಮ ಮತ್ತು ಕುರುಬ ಸಮುದಾಯ ಎಸ್​ಟಿಗೆ ಸೇರಿಸುವಂತೆ ಒತ್ತಾಯಿಸಿ ಕುರುಬ ಎಸ್​ಟಿ ಹೋರಾಟ ಸಮಿತಿ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿತು.

ಕುರುಬ ಶ್ರೀಗಳ ನಿಯೋಗ
ಕುರುಬ ಶ್ರೀಗಳ ನಿಯೋಗ

By

Published : Nov 27, 2020, 1:19 PM IST

ಬೆಂಗಳೂರು: ಕುರುಬ ಸಮುದಾಯವನ್ನು ಎಸ್​ಟಿ ಗೆ ಸೇರಿಸುವಂತೆ ನವದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ಕುರುಬ ಎಸ್​ಟಿ ಹೋರಾಟ ಸಮಿತಿ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿತು.

ಸಿಎಂ ಭೇಟಿ ಮಾಡಿದ ಕುರುಬ ಶ್ರೀಗಳ ನಿಯೋಗ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ನೇತೃತ್ವದ ಸಮುದಾಯದ ಶ್ರೀಗಳು ಮತ್ತು ಜನಪ್ರತಿನಿಧಿಗಳನ್ನೊಳಗೊಂಡ ನಿಯೋಗ ಭೇಟಿ ನೀಡಿತು. ಸಿಎಂ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿ, ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿಯಾದ ಕುರಿತು ಮಾಹಿತಿ ಹಂಚಿಕೊಂಡರು.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ಅನುದಾನ ಮೀಸಲಿರಿಸಿದ ಹಾಗೆಯೇ ಕುರುಬ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ಅನುದಾನ ಮೀಸಲಿರಿಸುವ ಬೇಡಿಕೆ ಮುಂದಿಟ್ಟರು. ಮತ್ತು ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸುವುದು, ಪರಿಷತ್ ಸದಸ್ಯ ಹೆಚ್.ವಿಶ್ವನಾಥ್​ಗೂ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಯಿತು. ಮನವಿ ಆಲಿಸಿದ ಸಿಎಂ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಿಎಂ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿರಂಜನಾನಂದಪುರಿ ಶ್ರೀಗಳು, ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸುವ ಹೋರಾಟದ ಭಾಗವಾಗಿ ದೆಹಲಿಗೆ ಭೇಟಿ ನೀಡಿದ್ದೆವು. ಸಂಬಂಧಪಟ್ಟ ಸಚಿವರಿಗೆ ಮತ್ತು ಇಲಾಖೆಯವರಿಗೆ ಮನವಿ ನೀಡಿ ಮಾತುಕತೆ ನಡೆಸಿ ಬಂದಿದ್ದೇವೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿಯನ್ನು ಕೊಟ್ಟಿದ್ದೇವೆ. ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

1976 ರಲ್ಲಿ ಎಸ್​ಟಿಗೆ ಶಿಫಾರಸು ಮಾಡಿದ್ದ ವೇಳೆ ಕುರುಬ ಎನ್ನುವ ಪದ ಬಿಟ್ಟು ಹೋಗಿದ್ದ ಹಿನ್ನೆಲೆಯಲ್ಲಿ ಆ ಪದವನ್ನು ಈಗ ಸೇರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಸೂಚಿಸಿದ್ದೇವೆ. ಈ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚೆ ಮಾಡಿ ಶಿಫಾರಸು ಮಾಡುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಮಾಹಿತಿ ನೀಡಿದ್ದಾರೆ ಎಂದರು.

ABOUT THE AUTHOR

...view details