ಕರ್ನಾಟಕ

karnataka

ETV Bharat / city

ಗೊಂಡ ಕುರುಬ ಸಮುದಾಯ ಎಸ್ಟಿಗೆ ಸೇರಿಸಿ; ಕುರುಬ ಸಮಾಜ ಒತ್ತಾಯ - Gonda Kuruba Society

ಕಾಗಿನೆಲೆ ಮಹಾಸಂಸ್ಥಾನದ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮಿಗಳು, ಕಾಗಿನೆಲೆ ಶಾಖಾಮಠ ಹೊಸದುರ್ಗದ ಈಶ್ವರಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬೆಂಗಳೂರಿನಲ್ಲಿರುವ ಸಚಿವ ಈಶ್ವರಪ್ಪನವರ ಮನೆಗೆ ಭೇಟಿ ನೀಡಿ ಗೊಂಡ ಕುರುಬ ಸಮಾಜವನ್ನು ಎಸ್​ಟಿಗೆ ಸೇರಿಸುವ ಕುರಿತು ಚರ್ಚೆ ನಡೆಸಿತು.

Kuruba Society delegation visits Minister KS Eshwarappa
ಗ್ರಾಮೀಣಾಭಿವೃದ್ಧಿ ಸಚಿವರ ಮನೆಗೆ ಕುರುಬ ಸಮಾಜದ ನಿಯೋಗ

By

Published : Oct 17, 2020, 10:37 PM IST

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರ ಮನೆಗೆ ಕುರುಬ ಸಮಾಜದ ನಿಯೋಗ ಭೇಟಿ ನೀಡಿ ಗೊಂಡ ಕುರುಬ ಸಮಾಜವನ್ನು ಎಸ್​ಟಿಗೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು.

ಕಾಗಿನೆಲೆ ಮಹಾಸಂಸ್ಥಾನದ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮಿಗಳು, ಕಾಗಿನೆಲೆ ಶಾಖಾಮಠ ಹೊಸದುರ್ಗದ ಈಶ್ವರಾನಂದಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬೆಂಗಳೂರಿನಲ್ಲಿರುವ ಸಚಿವರ ಮನೆಗೆ ಭೇಟಿ ನೀಡಿದ ನಿಯೋಗವು ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಯಲ್ಲಿರುವ ಗೊಂಡ ಕುರುಬ ಸಮಾಜವನ್ನು ಎಸ್​ಟಿಗೆ ಸೇರಿಸುವ ನಿಟ್ಟಿನಲ್ಲಿ ಹೋರಾಟ ರೂಪಿಸುವ ಕುರಿತು ಚರ್ಚೆ ಮಾಡಿದರು.

ನಿಯೋಗದಲ್ಲಿದ್ದ ಬೀದರ್ ಜಿಲ್ಲಾ ಗೊಂಡ (ಕುರುಬ) ಎಂಪ್ಲಾಯ್ಸ್ ಅಸೊಸಿಯೇಶನ್ ಮುಖಂಡರು ಸಮಸ್ಯೆಗಳನ್ನು ವಿವರಿಸಿದರು. ಈ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು, ಹೋರಾಟದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಅಸೋಸಿಯೇಶನ್​​ನ ಅಧ್ಯಕ್ಷರಾದ ಬಸವರಾಜ್ ಮಾಲಗೆ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details