ಕರ್ನಾಟಕ

karnataka

ETV Bharat / city

RRನಗರ ಕಣಕ್ಕೆ ಕುಸುಮಾ?: ಸಿದ್ದರಾಮಯ್ಯರನ್ನು ಭೇಟಿಯಾದ ತಂದೆ ಹನುಮಂತರಾಯಪ್ಪ! - ದಿವಂಗತ ಡಿ.ಕೆ.ರವಿ ಪತ್ನಿ ಕುಸು‌ಮಾ

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಕಣಕ್ಕೆ ಕುಸುಮಾ ಅವರನ್ನ ಕಣಕ್ಕಿಳಿಸುವ ಬಗ್ಗೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಲವು ತೋರಿದ್ದಾರೆ.

Hanumantarayappa
ಸಿದ್ದರಾಮಯ್ಯ

By

Published : Oct 1, 2020, 10:25 PM IST

ಬೆಂಗಳೂರು:ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಕಣದಲ್ಲಿ ದಿವಂಗತ ಡಿ.ಕೆ.ರವಿ ಪತ್ನಿ ಕುಸು‌ಮಾ ಹೆಸರು ಬಲವಾಗಿ ಕೇಳಿ ಬರುತ್ತಿದ್ದು, ಅದರ ಬೆನ್ನಲ್ಲೇ ತಂದೆ ಹನುಮಂತರಾಯಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಕುಸುಮಾ ತಂದೆ ಹನುಮಂತರಾಯಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜೊತೆ ತೆರಳಿ ತಮ್ಮ ಮಗಳನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಮಾರು ಅರ್ಧ ತಾಸಿಗೂ ಹೆಚ್ಚು ಕಾಲ ಹನುಮಂತರಾಯಪ್ಪ ಅವರು ಸಿದ್ದರಾಮಯ್ಯ ಜೊತೆ ಸಮಾಲೋಚನೆ ನಡೆಸಿದರು.

ಕುಸುಮಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಲವು ತೋರಿದ್ದಾರೆ. ಇತ್ತ ಆರ್.ಆರ್.ನಗರದಲ್ಲಿ ಅಚ್ಚರಿಯ ಅಭ್ಯರ್ಥಿ ಕಣಕ್ಕೆ ಇಳಿಸುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ. ಡಿಕೆಶಿ ಹೇಳಿಕೆ ಬೆನ್ನಲ್ಲೆ ಸಿದ್ದು ಭೇಟಿ ಮಾಡಿ ಹನುಂಮತರಾಯಪ್ಪ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಇದಕ್ಕೂ ಮುನ್ನ ಹನುಂತರಾಯಪ್ಪ ಹಾಗೂ ಪುತ್ರಿ ಕುಸುಮಾ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮಿಗಳ ಆಶೀರ್ವಾದ ಪಡೆದಿದ್ದರು.

ಮೂಲಗಳ ಪ್ರಕಾರ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಪತ್ನಿ ಕುಸುಮಾ ಅವರನ್ನು ಆರ್.ಆರ್.ನಗರ ಉಪಸಮರದ ಕಣಕ್ಕಿಳಿಸಲು ಒಲವು ವ್ಯಕ್ತವಾಗಿದೆ ಎನ್ನಲಾಗಿದೆ. ಇದರ ಜೊತೆಗೆ ಮಾಗಡಿ ಬಾಲಕೃಷ್ಣ, ಪ್ರಿಯ ಕೃಷ್ಣಾ, ಕೃಷ್ಣಮೂರ್ತಿ, ರಾಜ್ ಕುಮಾರ್ ಹೆಸರುಗಳೂ ಕೇಳಿ ಬರುತ್ತಿದೆ.

ABOUT THE AUTHOR

...view details