ಕರ್ನಾಟಕ

karnataka

ETV Bharat / city

ವಿವಾದಿತ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ - ಭೂ ಸುಧಾರಣೆ ಕಾಯ್ದೆಗೆ ಸುಗ್ರೀವಾಜ್ಞೆ

ನೀರಾವರಿ ಜಮೀನನ್ನು ಕೃಷಿಯೇತರ ಚಟುವಟಿಕೆಗಳಿಗೆ ಖರೀದಿಸದಂತೆ ಹಾಗೂ ಎಸ್‍ಸಿ, ಎಸ್​ಟಿ ಸಮುದಾಯದ ಜಮೀನನ್ನು ಯಾವುದೇ ಉದ್ದೇಶಕ್ಕೆ ಖರೀದಿಸಲು ಅವಕಾಶ ಇಲ್ಲದಂತೆ ಹೊಸ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ.

LAND REFORMS ACT
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ

By

Published : Nov 4, 2020, 12:49 AM IST

ಬೆಂಗಳೂರು: ಅಧಿವೇಶನದಲ್ಲಿ ಅಂಗೀಕೃತಗೊಳ್ಳದ ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದೆ.

ನೀರಾವರಿ ಜಮೀನನ್ನು ಕೃಷಿಯೇತರ ಚಟುವಟಿಕೆಗಳಿಗೆ ಖರೀದಿಸದಂತೆ ಹಾಗೂ ಎಸ್‍ಸಿ, ಎಸ್​ಟಿ ಸಮುದಾಯದ ಜಮೀನನ್ನು ಯಾವುದೇ ಉದ್ದೇಶಕ್ಕೆ ಖರೀದಿಸಲು ಅವಕಾಶ ಇಲ್ಲದಂತೆ ಹೊಸ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ
1974ರ ಮೂಲ ಕಾಯ್ದೆಗೆ ಜುಲೈ ತಿಂಗಳಲ್ಲಿ ತಿದ್ದುಪಡಿ ತಂದು ಸೆಕ್ಷನ್ 80, 79ಎ, 79ಬಿ, 79ಸಿ ಕಲಂಗಳನ್ನು ರದ್ದುಪಡಿಸಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ನಂತರ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಅಧಿವೇಶನದಲ್ಲಿ ವಿಧೇಯಕ ಮಂಡಿಸಿತ್ತು. ಆದರೆ, ವಿಧಾನಸಭೆಯಲ್ಲಿ ವಿರೋಧ ಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಿದವರ ಜಮೀನು ಖರೀದಿ ಮಾಡುವುದಕ್ಕೆ ನಿಷೇಧ, ನೀರಾವರಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಖರೀದಿಸಲು ನಿರ್ಬಂಧ ಹಾಗೂ ಒಂದು ಕುಟುಂಬದ ಸದಸ್ಯರು ಹೊಂದುವ ಜಮೀನಿನ ಮಿತಿಯನ್ನು 54 ಎಕರೆಗೆ ನಿಗದಿಗೊಳಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮತ್ತೆ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ
ಆದರೆ, ವಿಧಾನ ಪರಿಷತ್‍ನಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆಯದೇ ಇದ್ದುದರಿಂದ ರಾಜ್ಯ ಸರ್ಕಾರ ಜುಲೈನಲ್ಲಿ ಹೊರಡಿಸಿದ್ದ ಸುಗ್ರೀವಾಜ್ಞೆ ನವೆಂಬರ್ 3ಕ್ಕೆ ನಿರಶನಗೊಂಡಿದೆ. ಈ ಹಿನ್ನೆಲೆಯಲ್ಲಿ ಜುಲೈ 13 ರಂದು ಹೊರಡಿಸಿರುವ ಸುಗ್ರೀವಾಜ್ಞೆ ಮುಂದಿನ ಆರು ತಿಂಗಳು ಜಾರಿಯಲ್ಲಿರುವಂತೆ ಮತ್ತೆ ಕೆಲವು ತಿದ್ದುಪಡಿಗಳೊಂದಿಗೆ ಸುಗ್ರೀವಾಜ್ಞೆ ಹೊರಡಿಸಿದೆ.

ABOUT THE AUTHOR

...view details