ಕರ್ನಾಟಕ

karnataka

ETV Bharat / city

ಕೋವಿಡ್ ನಿಯಮ ಉಲ್ಲಂಘನೆ ಆರೋಪ : ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಒತ್ತಾಯ - Bengaluru latest news

ಕೋವಿಡ್ ನಿಯಮ ಉಲ್ಲಂಘಿಸಿರುವ ಆರೋಪದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರೊಬ್ಬರು ಪೊಲೀಸರಿಗೆ ಪತ್ರ ಬರೆದಿದ್ದಾರೆ.

lawer-mary-akkamma-letter-to-police-against-home-minister-araga-jnanendra
ಕೋವಿಡ್ ನಿಯಮ ಉಲ್ಲಂಘನೆ ಆರೋಪ : ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಒತ್ತಾಯ

By

Published : Aug 20, 2021, 1:49 AM IST

ಬೆಂಗಳೂರು :ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಕಚೇರಿ ಉದ್ಘಾಟನೆ ವೇಳೆ ನೂರಾರು ಜನರ ಭೇಟಿಗೆ ಅವಕಾಶ ನೀಡುವ ಮೂಲಕ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.

ಗೃಹ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಜರುಗಿಸುವಂತೆ ವಕೀಲೆಯಾದ ಮೇರಿ ಅಕ್ಕಮ್ಮ ವಿಧಾನಸೌಧ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದಿದ್ದಾರೆ.

ಆಗಸ್ಟ್ 13ರಂದು ವಿಕಾಸಸೌಧದಲ್ಲಿ ತಮ್ಮ ಕಚೇರಿಯನ್ನು ಉದ್ಘಾಟಿಸಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ನೂರಾರು ಜನರಿಗೆ ಅವಕಾಶ ನೀಡಿದ್ದರು. ಈ ವೇಳೆ ಗೃಹ ಸಚಿವರೇ ಮಾಸ್ಕ್ ಧರಿಸಿರಲಿಲ್ಲ. ಜತೆಗೆ ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಮೂಲಕ ಕೋವಿಡ್ ಮಾರ್ಗಸೂಚಿಗಳನ್ನು, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ವಕೀಲೆ ಮೇರಿ ಅಕ್ಕಮ್ಮ ಪತ್ರದಲ್ಲಿ ಕೋರಿದ್ದಾರೆ.

ಇದನ್ನೂ ಓದಿ:ಪೋಷಕರು ಮಕ್ಕಳನ್ನು ತ್ಯಜಿಸುವ ಪ್ರಕರಣಗಳ ಬಗ್ಗೆ ಹೈಕೋರ್ಟ್ ಕಳವಳ: ಪರಿಶೀಲನೆಗೆ ನಿರ್ದೇಶನ

ABOUT THE AUTHOR

...view details