ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ವಿವಿಧ ಸಂಘಟನೆಗಳ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.
ಫೆ. 14 ರಿಂದ ಆರಂಭವಾಗುವ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ವಿವಿಧ ವಿಚಾರಗಳನ್ನು ಸರ್ಕಾರದ ಮುಂದಿಟ್ಟು ಒತ್ತಡ ಹೇರಲು ಪ್ರತಿಪಕ್ಷ ಕಾಂಗ್ರೆಸ್ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ವಿವಿಧ ಸಂಘಟನೆಗಳ ನಾಯಕರು ಡಿಕೆಶಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಡಿ.ಕೆ ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದಲ್ಲಿಯೇ ವಿವಿಧ ಮುಖಂಡರನ್ನು ಭೇಟಿಯಾಗುತ್ತಿದ್ದಾರೆ. ನಿನ್ನೆ ದಿನವಿಡೀ ಹಲವು ನಾಯಕರು ಭೇಟಿಯಾಗಿ ಚರ್ಚಿಸಿದ್ದಾರೆ. ಈ ವೇಳೆ ಯುವ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್, ಸುರಭಿ ದ್ವಿವೇದಿ ಮತ್ತಿತರರು ಇದ್ದರು.
ಫೆ.10 ರಂದು ಅಧಿಕಾರ ಸ್ವೀಕರಿಸಲಿರುವ ನಲಪಾಡ್ ಅಂದಿನ ಕಾರ್ಯಕ್ರಮದ ಕುರಿತು ಡಿಕೆಶಿ ಜೊತೆ ಚರ್ಚಿಸಿದ್ದಾರೆ. ಅಲ್ಲದೇ ಅಧಿವೇಶನ ನಡೆಯುವ ಸಂದರ್ಭ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಕೈಗೊಳ್ಳುವ ಹೋರಾಟಗಳ ಕುರಿತು ಸಹ ಸಮಾಲೋಚಿಸಿದ್ದಾರೆ. ಇನ್ನೂ ನಿನ್ನೆಯೇ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ನಾಯಕಿಯರಾದ ವೀಣಾ ಕಾಶಪ್ಪನವರ್, ಅಕೈ ಪದ್ಮಶಾಲಿ, ಬಾಯಕ್ಕ ಮೇಟಿ, ಕಾಂತಾ ನಾಯಕ್ ಮತ್ತಿತರರು ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.
ಇದನ್ನೂ ಓದಿ:ಬೆಸ್ಕಾಂ, ಜಲಮಂಡಳಿ ವಿರುದ್ಧ ಎಫ್ಐಆರ್ ದಾಖಲಿಸಲು ಠಾಣೆಗಳಿಗೆ ಸೂಚಿಸಿ: ಪಾಲಿಕೆಯಿಂದ ಪೊಲೀಸ್ ಆಯುಕ್ತರಿಗೆ ಮನವಿ