ಕರ್ನಾಟಕ

karnataka

ETV Bharat / city

ನನ್ನ ಹೆಸರಲ್ಲಿ ಅಭಿಮಾನಿ ಸಂಘ ಸ್ಥಾಪಿಸಿದರೆ ಕಾನೂನು ಕ್ರಮ: ಡಿಕೆಶಿ ಎಚ್ಚರಿಕೆ - ಅಭಿಮಾನಿ ಸಂಘ

ನನ್ನ ಮತ್ತು ಸಹೋದರ ಡಿ.ಕೆ. ಸುರೇಶ್​ ಹೆಸರಿನಲ್ಲಿ ಅಭಿಮಾನಿ ಟ್ರಸ್ಟ್​​, ಸಂಘಟನೆಗಳನ್ನು ಸ್ಥಾಪಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.

KPCC President DK Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

By

Published : Aug 11, 2020, 1:38 PM IST

ಬೆಂಗಳೂರು: ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ.ಕೆ. ಸುರೇಶ್ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ರವಾನಿಸಿದ್ದಾರೆ.

ಸಂಸದ ಡಿ.ಕೆ.ಸುರೇಶ್​

ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುತ್ತಿದ್ದಂತೆ ಹಲವರು ಅಭಿಮಾನಿ ಸಂಘ ಸ್ಥಾಪಿಸಿದ್ದರು. ಅಲ್ಲದೇ ಅದರ ಮೂಲಕ ವಿವಿಧ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಕೇಳಿಬಂದ ಹಿನ್ನೆಲೆ, ತಮ್ಮ ಹೆಸರು ಕೆಡಬಹುದು ಎಂಬ ಆತಂಕದಿಂದ ಡಿಕೆಶಿ ಈ ಒಂದು ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ABOUT THE AUTHOR

...view details