ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆತಂಕ ವ್ಯಕ್ತಪಡಿಸಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಆನಾಹುತವಾಗದಂತೆ ಸರ್ಕಾರ ತಡೆಯಲಿ: ಕಾಂಗ್ರೆಸ್ ಟ್ವೀಟ್ - ಉತ್ತರ ಕರ್ನಾಟಕ ಮಳೆ ಬಗ್ಗೆ ಕಾಂಗ್ರೆಸ್ ಟ್ವೀಟ್
ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಮಳೆ ಆರಂಭವಾಗಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರ ಆತಂಕ ವ್ಯಕ್ತಪಡಿಸಿದೆ. ಅಗತ್ಯವಿರುವ ಕಡೆ ಜನ ಜಾನುವಾರುಗಳನ್ನು ಸ್ಥಳಾಂತರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.
ಕಾಂಗ್ರೆಸ್ ಟ್ವೀಟ್
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಮತ್ತೆ ಉತ್ತರ ಕರ್ನಾಟಕದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ರಾಜ್ಯ ಸರ್ಕಾರವು ತಕ್ಷಣವೇ ಮುಂಜಾಗ್ರತಾ ಕಾರ್ಯಗಳನ್ನು ಕೈಗೊಂಡು ಯಾವುದೇ ಅನಾಹುತ ಆಗದಂತೆ ತಡೆಯಬೇಕು ಎಂದು ಒತ್ತಾಯಿಸಿದೆ. ಹಾಗೆಯೇ ಅಗತ್ಯವಿರುವ ಕಡೆ ಜನ ಜಾನುವಾರುಗಳನ್ನು ಸ್ಥಳಾಂತರಿಸಲು ಆಡಳಿತ ಯಂತ್ರವನ್ನು ಚುರುಕುಗೊಳಿಸಬೇಕು ಎಂದು ಮನವಿ ಮಾಡಿದೆ.
ಇನ್ನು, ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಕುರಿತು ಆ ರಾಜ್ಯಗಳ ಜನರು ವಾಸ್ತವಿಕ ವಿಷಯಗಳ ಬಗ್ಗೆ ತಿಳಿದು ಮತ ಚಲಾಯಿಸುವಂತೆ ಕಾಂಗ್ರೆಸ್ ಕರೆ ನೀಡಿದೆ.