ಬೆಂಗಳೂರು :ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕಾದ ಸಂಬಂಧ ಸಕ್ಷಮ ಪ್ರಾಧಿಕಾರದ ವಿಶೇಷ ಅಧಿಕಾರಿ ಹರ್ಷಗುಪ್ತಾ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮಾಹಿತಿ ಕೋರಿ ಪತ್ರ ಬರೆದಿದ್ದಾರೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತರಕ್ಷಣಾ ಕಾಯ್ದೆ (ಕೆಪಿಐಡಿ)-2004 ಪ್ರಕಾರ 1 ರಿಂದ 23 ಆರೋಪಿಗಳ ಆಸ್ತಿ ಮಧ್ಯಂತರ ಜಪ್ತಿ ಮಾಡಲಾಗಿದೆ. ಆರೋಪಿ ನಂ.24ರಿಂದ 28ರ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಸರ್ಕಾರ ಸಿಬಿಐನಿಂದ ಅಗತ್ಯ ವರದಿ ಪಡೆಯಬೇಕು. ಜಪ್ತಿ ಮಾಡಿಕೊಳ್ಳಬೇಕಾದ ಆಸ್ತಿಗಳ ಬಗ್ಗೆ ವರದಿ ನೀಡುವಂತೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.