ಕರ್ನಾಟಕ

karnataka

By

Published : Dec 22, 2020, 4:37 PM IST

ETV Bharat / city

ಭಾಗ್ಯಲಕ್ಷ್ಮಿ ಯೋಜನೆಯನ್ನು ಎಲ್​ಐಸಿ ಮೂಲಕ ಜಾರಿಗೊಳಿಸಲು ಸಿಎಂಗೆ ಮನವಿ

ಭಾಗ್ಯಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಪಾವತಿಸುತ್ತಿರುವ ಪ್ರೀಮಿಯಂ ಮೊತ್ತಕ್ಕೆ 1 ವರ್ಷದ ವೇಳೆಗೆ 1 ಲಕ್ಷ ರೂ. ನೀಡಲು ಎಲ್​ಐಸಿಯು ಅಸಹಾಯಕತೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭಾರತೀಯ ಅಂಚೆಯ ಸುಕನ್ಯಾ ಸಮೃದ್ಧಿ ಮೂಲಕ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

LIC delegation
ಎಲ್ಐಸಿ ನಿಯೋಗ

ಬೆಂಗಳೂರು:ಭಾಗ್ಯಲಕ್ಷ್ಮಿ ಯೋಜನೆಯಡಿ ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸಿ, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ತಮ್ಮನ್ನು ಭೇಟಿಯಾದ ಎಲ್ಐಸಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.

ಇಂದು ಎಲ್​ಐಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ನೇತೃತ್ವದ ಎಲ್​ಐಸಿ ಅಧಿಕಾರಿಗಳ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಎಲ್​ಐಸಿ ಮೂಲಕವೇ ಜಾರಿಗೊಳಿಸುವ ಕುರಿತು ಮತ್ತೊಮ್ಮೆ ಪರಿಶೀಲಿಸುವಂತೆ ಮನವಿ ಮಾಡಿತು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಭಾಗ್ಯಲಕ್ಷ್ಮಿ ಯೋಜನೆಯಡಿ ನೀವು ನೀಡಬಹುದಾದ ಕೊಡುಗೆಗಳ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನಂತರ ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು. ಭಾಗ್ಯಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಪಾವತಿಸುತ್ತಿರುವ ಪ್ರೀಮಿಯಂ ಮೊತ್ತಕ್ಕೆ 1 ವರ್ಷದ ವೇಳೆಗೆ 1 ಲಕ್ಷ ರೂ. ನೀಡಲು ಎಲ್​ಐಸಿಯು ಅಸಹಾಯಕತೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭಾರತೀಯ ಅಂಚೆಯ ಸುಕನ್ಯಾ ಸಮೃದ್ಧಿ ಮೂಲಕ ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಐಸಿ ಅಧಿಕಾರಿಗಳು ಇಂದು ಸಿಎಂ ಭೇಟಿ ಮಾಡಿದರು.

ಇದನ್ನೂ ಓದಿ:ಡಿವೈಎಸ್​​ಪಿ ಲಕ್ಷ್ಮಿ ಆತ್ಮಹತ್ಯೆ ಪ್ರಕರಣ: FSL ರಿಪೋರ್ಟ್ ನಲ್ಲಿ ಆತ್ಮಹತ್ಯೆ ಎಂದು ಉಲ್ಲೇಖ

ABOUT THE AUTHOR

...view details