ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿ ನಾಳೆಯಿಂದ ಮದ್ಯ ಮಾರಾಟ ಬಂದ್?

ರಾಜ್ಯ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಅಬಕಾರಿ ಆದಾಯ ಹರಿದುಬರುತ್ತಿದೆ. ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಅಬಕಾರಿ ಇಲಾಖೆ ಕೂಡ ಒಂದು.

ಮದ್ಯ ಮಾರಾಟ
ಮದ್ಯ ಮಾರಾಟ

By

Published : Jul 8, 2022, 5:42 PM IST

Updated : Jul 8, 2022, 6:38 PM IST

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9 ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್‌. ಗುರುಸ್ವಾಮಿ ಎಚ್ಚರಿಸಿದ್ದಾರೆ. ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆ ಆಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ ಎಂದರು.

ಕೆ.ಎಸ್.ಬಿ.ಸಿ.ಎಲ್ ಅಕೌಂಟ್​​ಗೆ ಹಣ ಹಾಕಿದರೆ ಮೊದಲು ನಮಗೆ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಬಿಲ್ ವ್ಯವಸ್ಥೆ ಮ್ಯಾನ್ಯುವಲ್ ಆಗಿತ್ತು. ಆದರೆ ಏಪ್ರಿಲ್ 1ರಿಂದ ಹೊಸ ಪದ್ಧತಿ ಆರಂಭವಾಗಿದೆ. ವೆಬ್ ಇಂಡೆಂಟಿಂಗ್ ವ್ಯವಸ್ಥೆ ಜಾರಿಯಾದಾಗಿನಿಂದ ಎಲ್ಲವನ್ನೂ ಹಿಂದಿನ ದಿನವೇ ಪೂರ್ಣಗೊಳಿಸಬೇಕು. ಇದರಿಂದ ಸಗಟು ಮದ್ಯ ಖರೀದಿದಾರರಿಗೇ ಸಂಕಷ್ಟ ಎದುರಾಗಿದೆ. ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮದ್ಯ ಮರಾಟಗಾರರಿಗೆ ಸಕಾಲಕ್ಕೆ ಮದ್ಯ ಸಿಗದ ದುಃಸ್ಥಿತಿ ನಿರ್ಮಾಣವಾಗಿದೆ. ಹೊಸ ಇ-ಇಂಡೆಂಟಿಂಗ್ ಸಾಫ್ಟವೇರ್ ನಿಂದಾಗಿ ಸಮಸ್ಯೆ ಉದ್ಭವಿಸಿದೆ. ಅನೇಕ ಬಾರಿ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಜುಲೈ 1ರಿಂದ ಮದ್ಯ ಖರೀದಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, 24 ಗಂಟೆಯಲ್ಲಿ ಸಮಸ್ಯೆ ಸರಿಪಡಿಸಲು ಆಗ್ರಹಿಸಿದರು.

(ಇದನ್ನೂ ಓದಿ: ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು, ಇಬ್ಬರ ದುರ್ಮರಣ)

Last Updated : Jul 8, 2022, 6:38 PM IST

ABOUT THE AUTHOR

...view details