ಬೆಂಗಳೂರು :ಜನತಾ ಕರ್ಫ್ಯೂ ಸಾಕಷ್ಟು ಯಶಸ್ಸು ಕಾಣದ ಕಾರಣದಿಂದ ಕರ್ನಾಟಕದಲ್ಲಿ ಲಾಕ್ಡೌನ್ ಮತ್ತಷ್ಟು ಕಠಿಣಗೊಳ್ಳಲಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಕೋವಿಡ್ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ಡೌನ್ ಮೊರೆ ಹೋಗಿದೆ.
ಮೇ 10ರ ಬೆಳಗ್ಗೆ 6ರಿಂದ ಮೇ 24ರವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರಲಿದೆ. ಅಗತ್ಯ ಸೇವೆಗಳನ್ನ ಹೊರತುಪಡಿಸಿ ಇನ್ನುಳಿದ ಚಟುವಟಿಕೆಗಳು ಅನುಮತಿ ಇಲ್ಲ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗುತ್ತಿವೆ. ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್- 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು.
ಆದರೆ, ಇದೀಗ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಹೊಸ ಮಾರ್ಗಸೂಚಿಯು ಮೇ 10ರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಲಾಕ್ಡೌನ್ನಲ್ಲಿ ಏನಿರುವುದಿಲ್ಲ..?
- ಲಾಕ್ಡೌನ್ ಅವಧಿಯಲ್ಲಿ ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ
- ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ಬಂದ್
- ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್ಗಳು, ಕ್ರೀಡಾ ಸಂಕೀರ್ಣಗಳು ಬಂದ್
- ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್ಗಳು, ಬಾರ್ಗಳು ಬಂದ್
- ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ
- ಎಲ್ಲಾ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ
- ಜಿಲ್ಲೆಯಿಂದ ಜಿಲ್ಲೆಗೆ ಜನರ ಓಡಾಟಕ್ಕೆ ಅವಕಾಶ ನೀಡದ ಸರ್ಕಾರ
ಲಾಕ್ಡೌನ್ನಲ್ಲಿ ಏನಿರುತ್ತದೆ..?
- ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ
- ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳಿಗೆ ತುರ್ತು ಸಂದರ್ಭಗಳಲ್ಲಿ ಅವಕಾಶ
- ಹೋಟೆಲ್ಗಳು, ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ
- ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿ
- ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಒಪನ್
- ಎಲ್ಲಾ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ
- ಎಲ್ಲಾ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆಗೆ ಅವಕಾಶ
- ಎಲ್ಲಾ ಅಗತ್ಯ ಸರಕು-ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ
- ಸಾರ್ವಜನಿಕರ ಓಡಾಟಕ್ಕೆ ನಿಷೇಧ, ಕೆಲವು ವಿನಾಯಿತಿಗಳೊಂದಿಗೆ ಅವಕಾಶ
- ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತೆರೆಯಲು ಆಹಾರ, ದಿನಸಿ ಅಂಗಡಿಗಳು ಓಪನ್
- ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಮದ್ಯ ಮಾರಾಟ ಮಳಿಗೆಗಳಲ್ಲಿ ಪಾರ್ಸೆಲ್
- ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು
- ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ
- ಐಟಿ ಮತ್ತು ಐಟಿಇಎಸ್ ಕಂಪನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಣೆಗೆ ಅವಕಾಶ
- ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ
- ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ