ಬೆಂಗಳೂರು: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನಾಳೆ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ - ನಾಳೆ ವಿಧಾನಸಭೆಯಲ್ಲಿ ಜಂಟಿ ಸದಸ್ಯರನ್ನು ಉದ್ದೇಶಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ
ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಾಳೆ ವಿಧಾನಸಭೆಯಲ್ಲಿ ಮಾತನಾಡಲಿದ್ದಾರೆ. 'ಪ್ರಜಾಪ್ರಭುತ್ವ- ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವುದು' ಕುರಿತು ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾಳೆ ಮಧ್ಯಾಹ್ನ 2.30ಕ್ಕೆ ಬಿರ್ಲಾ ಅವರು 'ಪ್ರಜಾಪ್ರಭುತ್ವ- ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವುದು' ಕುರಿತು ವಿಧಾನಸಭೆಯಲ್ಲಿ ಮಾತನಾಡಲಿದ್ದಾರೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರು, ಸಂಸದರು, ಎಂಎಲ್‌ಸಿಗಳು ಹಾಗೂ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಇದೇ ಮೊದಲ ಬಾರಿಗೆ ಭಾಷಣ ಮಾಡುತ್ತಿರುವುದು. ಶನಿವಾರ ಬೆಳಗ್ಗೆ 11 ಗಂಟೆಗೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೂ ಅವರು ಮಾತನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.