ಕರ್ನಾಟಕ

karnataka

ETV Bharat / city

ನಾಡಗೀತೆಗೆ ಹೊಸರಾಗದ ಜತೆಗೆ ಹೊಸ ದೃಶ್ಯರೂಪ ನೀಡಿದ ಮಹೇಂದ್ರ ಮುಣೋತ್ - Mahendra Munoth latest news

ರಾಷ್ಟ್ರಕವಿ' ಕುವೆಂಪು ಅವರ 'ಜಯ ಭಾರತ ಜನನಿಯ ತನುಜಾತೆ! ಜಯ ಹೇ ಕರ್ನಾಟಕ ಮಾತೆ' ನಾಡಗೀತೆಗೆ ರಾಜಸ್ಥಾನ ಮೂಲದ ನಟ, ನಿರ್ಮಾಪಕ, ಉದ್ಯಮಿ ಹಾಗೂ ಗೋಪ್ರೇಮಿ ಮಹೇಂದ್ರ ಮುಣೋತ್ ಹೊಸ ರೂಪ ನೀಡುವ ಪ್ರಯತ್ನ ಮಾಡಿದ್ದಾರೆ..

New Version Of Kuvempu  Nadageethe
ಹೊಸ ರೂಪದ ನಾಡಗೀತೆ

By

Published : Mar 30, 2022, 4:12 PM IST

ರಾಷ್ಟ್ರಕವಿ ಕುವೆಂಪು ಅವರ 'ಜಯ ಭಾರತ ಜನನಿಯ ತನುಜಾತೆ! ಜಯ ಹೇ ಕರ್ನಾಟಕ ಮಾತೆ' ನಾಡಗೀತೆಯನ್ನ, 9 ನಿಮಿಷಗಳು ಹಾಡಲಾಗುತ್ತಿದೆ. ಅದನ್ನು 2 ನಿಮಿಷ 30 ಸೆಕೆಂಡ್​​ಗಳಿಗೆ ಕತ್ತರಿ ಪ್ರಯೋಗ ಮಾಡಲಾಗಿತ್ತು. ಇದು ರಾಷ್ಟ್ರ ಕವಿ ಕುವೆಂಪು ಅವರಿಗೆ ಅವಮಾನ ಎಂದು ಸಾಕಷ್ಟು ಕನ್ನಡ ಸಂಘಟನೆಗಳು, ಕನ್ನಡ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು.

ಹಾಗೇ, ರಾಜಸ್ಥಾನ ಮೂಲದ ಕನ್ನಡ ಅಭಿಮಾನಿ ನಟ, ನಿರ್ಮಾಪಕ, ಗೋ ಪ್ರೇಮಿ, ಮಹೇಂದ್ರ ಮುಣೋತ್ ಕೂಡ ರಾಷ್ಟ್ರ ಕವಿ ಕುವೆಂಪು ರಚಿಸಿದ ನಾಡಗೀತೆಯನ್ನ ಕಡಿಮೆ ಮಾಡಿದ್ದರೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಸದ್ಯ ಅವರು ನಾಡಗೀತೆಗೆ ಹೊಸರಾಗದ ಜತೆಗೆ ಹೊಸ ದೃಶ್ಯರೂಪ ನೀಡಿದ್ದಾರೆ.

ಹೊಸ ರೂಪದ ನಾಡಗೀತೆ ..

ಈ ಹಾಡಿನ‌ ಪ್ರದರ್ಶನ ಕಾರ್ಯಕ್ರಮ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ನಿರ್ದೇಶಕ ಬಿ.ಪಿ.ಹರಿಹರನ್ ಈ ಹಾಡಿನ ನಿರ್ದೇಶನ ಮಾಡಿದ್ದು, ವಿಜಯಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಪವನ್ ನೃತ್ಯ ನಿರ್ದೇಶನ ಹಾಗೂ ಕಲಾ ನಿರ್ದೇಶನ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಮಹೇಂದ್ರ ಮುಣೋತ್, ಇತ್ತೀಚೆಗೆ ನಮ್ಮ ನಾಡಗೀತೆಯನ್ನು ಮೊಟಕುಗೊಳಿಸಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿತು. ಕುವೆಂಪು ಅವರಂತಹ ಮಹಾನ್ ಕವಿ ರಚಿಸಿದ ಸಾಹಿತ್ಯವನ್ನು ಕಡಿತ ಮಾಡಿರುವುದು ಸರಿಯಲ್ಲ. ಹಾಗಾಗಿ, ಈ ಗೀತೆಗೆ ಹೊಸರಾಗ ಜೋಡಿಸಿ ಚಿತ್ರೀಕರಣ ಮಾಡಿದ್ದೇವೆ. ನಾನು ರಾಜಸ್ಥಾನದಲ್ಲಿ ಜನಿಸಿದವನಾದರೂ ಕನ್ನಡವೇ ನನ್ನ ಉಸಿರು. ಈ ನೆಲ ನನಗೆ ಎಲ್ಲವನ್ನೂ ಕೊಟ್ಟಿದೆ. ಈ ಹಾಡನ್ನು ಎಲ್ಲರೂ ವೀಕ್ಷಿಸಿ, ಕನ್ನಡವನ್ನು ಬೆಳೆಸಿ ಎಂದು ಮನವಿ ಮಾಡಿದ್ದಾರೆ.

ಸಂಗೀತ ನಿರ್ದೇಶಕ ವಿಜಯಕೃಷ್ಣ ಮಾತನಾಡಿ, ಇದನ್ನು ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಹಾಡಬೇಕಿತ್ತು. ಹಾಡು ಕೇಳಿ ಒಪ್ಪಿದ್ದರು. ಆದರೆ, ವಿಧಿಯಾಟದ ಮುಂದೆ ಅದು ನಡೆಯಲಿಲ್ಲ. ಹೊಸ ಟ್ಯೂನ್ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆಯಿದೆ ಎಂದರು.

ನಾಡಗೀತೆಗೆ ಹೊಸರಾಗದ ಜತೆಗೆ ಹೊಸ ದೃಶ್ಯರೂಪ : ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಪ್ರದರ್ಶನ ಕಾರ್ಯಕ್ರಮ..

ನಿರ್ದೇಶಕ ಹರಿಹರನ್ ಮಾತನಾಡಿ, ಈ ಗೀತೆಯನ್ನು ಕೊಡಚಾದ್ರಿಯಲ್ಲಿ ಚಿತ್ರೀಕರಿಸಬೇಕಿತ್ತು. ಆದರೆ, ಸಾಧ್ಯವಾಗಲಿಲ್ಲ. ಚಿಕ್ಕಮಂಗಳೂರು ಹಾಗೂ ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರೀಕರಿಸಿದ್ದೇವೆ. ನಮ್ಮ ಈ ಗೀತೆಯನ್ನು ಎರಡು ಶೈಲಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ ಎಂದು ತಿಳಿಸಿದರು.

ಒಟ್ಟಿನಲ್ಲಿ ನಾಡಪ್ರೇಮಿಗಳಿಗೆ ಮಹಾನ್ ಕವಿ ಕುವೆಂಪು ಅವರು ರಚಿಸಿರುವ ನಾಡಗೀತೆ ಮತ್ತೊಂದು ಶೈಲಿಯಲ್ಲಿ ನೋಡಲು ಲಭ್ಯವಾಗಿದೆ. ಕನ್ನಡ ನಾಡು ನುಡಿಯ ಬಗ್ಗೆ ಅಪಾರ ಗೌರವ, ಅಭಿಮಾನ ಇಟ್ಟುಕೊಂಡಿರುವ ನಟ, ನಿರ್ಮಾಪಕ, ಉದ್ಯಮಿ ಹಾಗೂ ಗೋಪ್ರೇಮಿ ಮಹೇಂದ್ರ ಮುಣೋತ್ ಅವರ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ABOUT THE AUTHOR

...view details