ಕರ್ನಾಟಕ

karnataka

ETV Bharat / city

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಬರ್ಬರ ಹತ್ಯೆ: ಹಳೆ ದ್ವೇಷ ಶಂಕೆ - ಶಿಕಾರಿ ಪಾಳ್ಯದ ನಿವಾಸಿಯ ಕೊಲೆ

ಶಿಕಾರಿಪಾಳ್ಯದ ನಿವಾಸಿಯೋರ್ವನನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್​ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

murder
ಹತ್ಯೆ

By

Published : Feb 2, 2021, 12:01 PM IST

ಬೆಂಗಳೂರು: ತಲೆಮೇಲೆ ಕಲ್ಲು ಎತ್ತಿಹಾಕಿ, ಡ್ರ್ಯಾಗರ್​ನಿಂದ ತಿವಿದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಎಲೆಕ್ಟ್ರಾನಿಕ್​ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸೈಯದ್ ಅಫ್ಸಲ್ (35) ಕೊಲೆಯಾದ ವ್ಯಕ್ತಿ. ಈತ ಎಲೆಕ್ಟ್ರಾನಿಕ್ ಸಿಟಿ ಬಳಿಯ ಶಿಕಾರಿಪಾಳ್ಯದ ನಿವಾಸಿಯಾಗಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು; ಇಬ್ಬರು ಸಾವು, ಮೂವರು ಗಂಭೀರ

ಎಲೆಕ್ಟ್ರಾನಿಕ್ ಸಿಟಿ ಬಳಿಯ ನಿರ್ಜನ ಪ್ರದೇಶದಲ್ಲಿ ಕೃತ್ಯ ನಡೆದಿದೆ. ತನ್ನ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಡ್ರ್ಯಾಗರ್​ನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನ್ ಸಿಟಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯದ ಪರಿಶೀಲನೆ ನಡೆಸಿ, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ABOUT THE AUTHOR

...view details