ಬೆಂಗಳೂರು:ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ನಗರದ ಸಿಟಿ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ಇದೀಗ ಬೆಳಕಿಗೆ ಬಂದಿದೆ.
ಪ್ರತಾಪ್ ಸಿಂಗ್(22) ಮೃತ ಯುವಕ. ಬಿವಿಕೆ ಅಯ್ಯಂಗಾರ್ ರಸ್ತೆಯ ಎಲ್.ಆರ್.ಸ್ಟ್ರೀಟ್‌ನ ಪ್ರತಾಪ್ ಫ್ಯಾಷನ್ಸ್ನಲ್ಲಿ ಘಟನೆ ನಡೆದಿದೆ.ಅಂಗಡಿ ಮಾಲೀಕರ ಸಂಬಂಧಿಯಾಗಿರುವ ಪ್ರತಾಪ್ ಬುಧವಾರ ಮಧ್ಯಾಹ್ನ ಅಂಗಡಿಯಲ್ಲಿ ಒಬ್ಬನೇ ಇದ್ದ. ಈ ವೇಳೆ ಮಾಲೀಕರು ಕಾರ್ಯಾನಿಮಿತ್ತ ಹೊರಗಡೆ ಹೋಗಿದ್ದರು. ಆಗ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿರಿ:ಹುಡಿ ಎಬ್ಬಿಸಿದ ಹಾನಗಲ್, ಧಗಿ ಧಗಿಸಿದ ಸಿಂದಗಿಯೊಳಗೆ ಬಹಿರಂಗ ಪ್ರಚಾರಕ್ಕೆ ತೆರೆ.. ಇನ್ನೇನಿದ್ರೂ ಒಳ್‌ಗಿಂದೊಳಗೇ..
ಕೆಲ ಸಮಯದ ಬಳಿಕ ಮಾಲೀಕರು ಅಂಗಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ, ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆ ಮುಂದುವರಿದಿದ್ದು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ನಾಳೆ ಕುಟುಂಬ ಸದಸ್ಯರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗುವುದು ಎಂದು ತಿಳಿದು ಬಂದಿದೆ. ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.